ಶಿವಮೊಗ್ಗ: ಕಳೆದ 34 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದವನನ್ನು ಕೊನೆಗೂ ಬಂಧಿಸುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
1987ರಲ್ಲಿ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ರೂಪ್ಲಾ ನಾಯ್ಕ(68) ಎಂಬುವವರನ್ನು ಬಂಧಿಸಲಾಗಿದೆ. ರೂಪ್ಲಾ ನಾಯ್ಕ ರಾಮಿನಕೊಪ್ಪದ ನಿವಾಸಿಯಾಗಿದ್ದು, ಕಳೆದ 34 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.
ಈತನನ್ನು ಬಂಧಿಸುವಂತೆ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.