ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದ ಕಲ್ಲು ಕ್ವಾರಿಯಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಕಲ್ಲು ಕ್ವಾರಿಯ ಮಾಲೀಕ ಅವಿನಾಶ್ ಕುಲಕರ್ಣಿ, ಕ್ವಾರಿ ನಡೆಸುತ್ತಿದ್ದ ಸುಧಾಕರ್ ಹಾಗೂ ನರಸಿಂಹ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಈ ಕುರಿತಂತೆ ವಿನೋಬನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಹಾ ಸ್ಫೋಟ... ಜವರಾಯನ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಮಲೆನಾಡು!