ETV Bharat / state

ಲಾಕ್​ಡೌನ್ ಉಲ್ಲಂಘಿಸಿದ ಆರೋಪದಲ್ಲಿ 213 ವಾಹನಗಳು ಜಪ್ತಿ

ಲಾಕ್​ಡೌನ್ ನಿಯಮ ಉಲ್ಲಂಘಿಸಿದ ಅಂಗಡಿಗಳ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020 ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

curfew in shimogga
ಲಾಕ್​ಡೌನ್ ಉಲ್ಲಂಘಿಸಿದ ಆರೋಪದಲ್ಲಿ 213 ವಾಹನಗಳು ಜಪ್ತಿ
author img

By

Published : May 22, 2021, 5:00 AM IST

ಶಿವಮೊಗ್ಗ: ಕೊರೊನಾ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಲಾಕ್​​ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಲಾಕ್​ಡೌನ್ ನಿಯಮ ಉಲ್ಲಂಘಿಸಿದ ಅಂಗಡಿಗಳ ಮಾಲೀಕರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020 ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಶುಕ್ರವಾರ ಶಿರಾಳಕೊಪ್ಪ ಪೊಲೀಸ್​ ಠಾಣೆಯಲ್ಲಿ 1 ಮತ್ತು ಕುಂಸಿ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಸೇರಿ ಒಟ್ಟು 2 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ''ಕೊಡುವ ಮೂರು ಸಾವಿರ ರೂಪಾಯಿಯಲ್ಲಿ ಬಾಡಿಗೆ ಕಟ್ಬೇಕಾ? ಬಡ್ಡಿ ಕಟ್ಬೇಕಾ? ಫೈನಾನ್ಸ್​ ಕಟ್ಬೇಕಾ..?''

ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 213 ವಾಹನಗಳನ್ನು (191 ದ್ವಿಚಕ್ರ ವಾಹನಗಳನ್ನು ಮತ್ತು 3 ಆಟೋಗಳನ್ನು ಹಾಗೂ 19 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದೆ.

ಒಟ್ಟು 225 ಪ್ರಕರಣಗಳನ್ನು ದಾಖಲಿಸಿ 1,11,300 ರೂಪಾಯಿ ದಂಡವನ್ನು ವಸೂಲಿ ಮಾಡುವ ಮೂಲಕ ಪೊಲೀಸರು ಅನಗತ್ಯವಾಗಿ ಓಡಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.