ETV Bharat / state

ಕರ್ಫ್ಯೂ ನಿಯಮ ಉಲ್ಲಂಘಿಸಿದ 243 ವಾಹನ ಜಪ್ತಿ: 95 ಸಾವಿರ ದಂಡ ವಸೂಲಿ - ಕರ್ಫ್ಯೂ ನಿಯಮ ಉಲ್ಲಂಘಿಸಿದ 243 ವಾಹನ ಜಪ್ತಿ

ಕಠಿಣ ಲಾಕ್​ಡೌನ್​ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಶಿವಮೊಗ್ಗದಲ್ಲಿ ಒಟ್ಟು 243 ವಾಹನಗಳನ್ನು ಸೀಜ್​ ಮಾಡಲಾಗಿದ್ದು, ಸುಮಾರು 95,000 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

shimogha
shimogha
author img

By

Published : May 18, 2021, 10:48 PM IST

ಶಿವಮೊಗ್ಗ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿ ಮಾಡಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗ್ತಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ನಿಯಮವನ್ನು ಉಲ್ಲಂಘಿಸಿದ ಅಂಗಡಿಯ ಮಾಲೀಕರ ವಿರುದ್ಧ THE KARNATAKA EPIDEMIC DISEASES ACT, 2020 ಕಾಯ್ದೆಯ ಅಡಿಯಲ್ಲಿ ಜಯನಗರ ಪೊಲೀಸ್ ಠಾಣೆಯಲ್ಲಿ - 01, ಸಾಗರ ಟೌನ್ ಪೊಲೀಸ್​ ಠಾಣೆಯಲ್ಲಿ - 01 ಮತ್ತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ -01 ಪ್ರಕರಣ ಸೇರಿ ಒಟ್ಟು ಮೂರು ಕೇಸ್​ಗಳನ್ನು ದಾಖಲಿಸಲಾಗಿದೆ.

ಲಾಕ್​ಡೌನ್​ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ 243 ವಾಹನಗಳನ್ನು (228 ದ್ವಿಚಕ್ರ ವಾಹನ, ಮತ್ತು 04 ಆಟೋ ಹಾಗೂ 11 ಕಾರು) ವಶಪಡಿಸಿಕೊಳ್ಳಲಾಗಿದೆ. ಒಟ್ಟು 212 ಪ್ರಕರಣಗಳನ್ನು ದಾಖಲಿಸಿ ರೂ. 95,000 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.