ETV Bharat / state

ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶದಿಂದ ಪ್ರಗತಿಗೆ ಮಾರಕ: ಸಚಿವ ಕೆ.ಎನ್.ರಾಜಣ್ಣ - ಅಡಿಕೆ ಕ್ಯಾನ್ಸರ್‌ ಕಾರಕವಲ್ಲ

ಶಿವಮೊಗ್ಗ ಜಿಲ್ಲಾ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಿ ಮಾತನಾಡಿದರು.

Minister KN Rajanna inaugurated the golden jubilee  association.
ಸಹಕಾರ ಸಂಘದ ಸುವರ್ಣ ಮಹೋತ್ಸವನ್ನು ಸಚಿವ ಕೆ ಎನ್ ರಾಜಣ್ಣ ಉದ್ಘಾಟಿಸಿದರು.
author img

By

Published : Aug 6, 2023, 9:20 PM IST

Updated : Aug 6, 2023, 10:56 PM IST

ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘದ ಸುವರ್ಣ ಮಹೋತ್ಸವ

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ರಾಜಕೀಯದ ಪ್ರವೇಶ ಇರಬಾರದು. ರಾಜಕಾರಣ ಪ್ರವೇಶಿಸಿದರೆ ಸಹಕಾರಿ ಸಂಸ್ಥೆಯ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು.

ಸಹಕಾರ ಕ್ಷೇತ್ರಕ್ಕೆ ಯುವಜನರನ್ನು ತರುವ ಕೆಲಸವಾಗಬೇಕು. ಯುವಜನರು ಸಹಕಾರಿ ಕ್ಷೇತ್ರದಲ್ಲಿ ಆಸಕ್ತಿ ವಹಿಸುವ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಪ್ರಯತ್ನ ನಡೆಸಲಿದೆ. ಆಪ್ಸ್ಕೋಸ್ ಮೊದಲ ಕಾರ್ಯದರ್ಶಿಯಾಗಿರುವ ಮಹಾಬಲರಾವ್ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ ಸಚಿವರು, ಪ್ರತಿ ಸಹಕಾರ ಸಂಘದ ಮೂಲಕ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುವ ಮೂಲಕ ರೈತರ ಆರ್ಥಿಕ ಸದೃಢತೆಗೆ ಶ್ರಮಿಸಲಾಗುತ್ತದೆ ಎಂದು ಹೇಳಿದರು.

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ: ಸುವರ್ಣ ಮಹೋತ್ಸವ ಕೂಪನ್ ಬಿಡುಗಡೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಅಡಿಕೆ ಬೆಳೆ ಜಿಲ್ಲೆಯ ಆರ್ಥಿಕ ಜೀವನಾಡಿ. ಅಡಿಕೆ ಬೆಳೆಗಾರರ ಪರವಾಗಿ ಕೇಂದ್ರ ಸರ್ಕಾರವಿದೆ. ಅಡಿಕೆ ಕ್ಯಾನ್ಸರ್‌ ಕಾರಕ ಎನ್ನುವ ವರದಿ ಬೆಳೆಗಾರ ಸಮೂಹಕ್ಕೆ ಆತಂಕ ತಂದಿತ್ತು. ಆದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಅಡಿಕೆ ಟಾಸ್ಕ್ಫೋರ್ಸ್ ಸ್ಥಾಪಿಸಿ ಅಡಿಕೆ ಕುರಿತು ವರದಿ ಬಂದಿದ್ದು ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಬದಲಾಗಿ ಕ್ಯಾನ್ಸರ್ ನಿವಾರಣೆಗೆ ಪೂರಕ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಅಡಿಕೆ ಮೇಲಿನ ಅಪವಾದವನ್ನು ತೆಗೆದು ಹಾಕುವ ಕೆಲಸ ಮಾಡಲಾಗುತ್ತದೆ ಎಂದರು.

ಅಡಿಕೆ ಪರ್ಯಾಯ ಉಪಯೋಗದ ಸಂಶೋಧನೆ: ಅಡಿಕೆಯ ಪರ್ಯಾಯ ಉಪಯೋಗದ ಬಗ್ಗೆ ಸಹ ಸಂಶೋಧನೆಯೂ ನಡೆಯುತ್ತಿದೆ. ಅಡಿಕೆ ಸಿಪ್ಪೆ, ಅಡಿಕೆ ಹಾಳೆಯನ್ನು ಸದ್ಭಳಕೆ ಮಾಡಿಕೊಳ್ಳುವತ್ತ ಗಮನ ಹರಿಸಲಾಗುತ್ತಿದೆ. ಕೇಂದ್ರ ಸರ್ಕಾರ ಒಪ್ಪಂದದ ಪ್ರಕಾರ 17 ಸಾವಿರ ಟನ್ ಅಡಿಕೆ ಭೂತಾನ್ ದೇಶದಿಂದ ಆಮದು ಮಾಡಿಕೊಳ್ಳುತ್ತಿದೆ ಎನ್ನುವ ಸುದ್ದಿ ಹರಡಿದೆ. ಇದು ಅಂತಾರಾಷ್ಟ್ರೀಯ ಒಪ್ಪಂದದ ಪ್ರಕಾರ ನಡೆಯುತ್ತಿದೆ. ಆದರೆ ಹಡಗಿನ ಮೂಲಕ ಅಡಿಕೆ ನಮ್ಮ ದೇಶಕ್ಕೆ ಬರಲು ಅನೇಕ ಸಮಸ್ಯೆಗಳು ಇರುವುದರಿಂದ ಇಂತಹ ಸುದ್ದಿಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಜಿಲ್ಲಾ‌ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಬೆಳೆಗಾರರ ಪರವಾಗಿ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘಗಳು ಇರುವುದರಿಂದ ಅಡಕೆ ಬೆಳೆಗಾರಿಗೆ ಸಹಾಯಕವಾಗಿವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನಾ ಭರವಸೆ ನೀಡಿದಂತೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸುವ ಕೆಲಸ ಮಾಡುತ್ತೇವೆ. ಬಗರ್ ಹುಕುಂ ಉಳುಮೆದಾರರ ಪರವಾಗಿ ನಮ್ಮ ಸರ್ಕಾರ ಇರಲಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಸ್ವಾಮಿರಾವ್, ಪ್ರಮುಖರಾದ ಷಡಾಕ್ಷರಿ ಎಚ್.ಎಲ್., ಕಿಶೋರ್ ಕುಮಾರ್ ಕೊಡಗಿ, ಎಚ್.ಎಸ್.ಮಂಜಪ್ಪ, ಆರ್.ಎಂ.ಮಂಜುನಾಥ ಗೌಡ ಹಾಜರಿದ್ದರು.

ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರ ಮನವಿ: ಶಾಲಾ ಅವಧಿಗೆ ಸರಿಯಾಗಿ ತಲುಪಲು ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು. ಸೊರಬ ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು. ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಸಮಸ್ಯೆಯಾಗಿದೆ. ಶಾಲಾ ಅವಧಿಗೆ ತಲುಪಲು ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮದೊಳಗೆ ಬಸ್ ಬಂದರೆ ರೋಗಿಗಳು ಆಸ್ಪತ್ರೆಗೂ ತೆರಳಲು ಅನುಕೂಲವಾಗಲಿದೆ ಎಂದು ಭವಾನಿ ಮತ್ತು ಸಿಂಚನಾ ಮತ್ತಿತರ ವಿದ್ಯಾರ್ಥಿನಿಯರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಶೀಘ್ರ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಮಕ್ಕಳಿಗೆ ಭರವಸೆ ನೀಡಿದರು.

ಇದನ್ನೂ ಓದಿ: ಕುಮಾರಸ್ವಾಮಿ ಪೆನ್‌ಡ್ರೈವ್ ಬಾಂಬ್: ಸಚಿವ ಭೈರತಿ ಸುರೇಶ್ ಹೇಳಿದ್ದೇನು?

Last Updated : Aug 6, 2023, 10:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.