ETV Bharat / state

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ - ಸಭೆ ನಡೆಸಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಶಿವಮೊಗ್ಗ ಸುದ್ದಿ

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

District Level Games of State Government Employees
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸಭೆ
author img

By

Published : Dec 9, 2019, 7:44 PM IST

ಶಿವಮೊಗ್ಗ: ಡಿಸೆಂಬರ್ ಮಾಸಾಂತ್ಯದೊಳಗಾಗಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ತಮ್ಮ ಕಚೇರಿಯ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುಂಪು ಹಾಗೂ ವೈಯಕ್ತಿಕ ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದರು.

ಈ ಕ್ರೀಡಾಕೂಟದ ಯಶಸ್ಸಿಗೆ ಸರ್ಕಾರದ ಎಲ್ಲಾ ಇಲಾಖೆಗಳ ಅಗತ್ಯ ಸಹಕಾರ ನೆರವು ಒದಗಿಸಲು ಸೂಚಿಸಲಾಗಿದ್ದು, 2 ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 3,000ಕ್ಕೂ ಹೆಚ್ಚಿನ ನೌಕರ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಅಗತ್ಯ ಊಟೋಪಹಾರದ ವ್ಯವಸ್ಥೆ ಒದಗಿಸಲಾಗುವುದಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳಿಗೆ ಇಲಾಖೆಯಿಂದ ಅನುಮತಿ ನೀಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಇನ್ನು ಈ ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ಈ ಬಾರಿಯ ಕ್ರೀಡಾಕೂಟವನ್ನು ವೈಶಿಷ್ಟ್ಯ ಪೂರ್ಣವಾಗಿ ಏರ್ಪಡಿಸಲು ಕೋರಲಾಗಿದ್ದು, ಭಾಗವಹಿಸುವ ಸ್ಪರ್ಧಿಗಳಿಗೆ ಕ್ಯಾಪ್ ಹಾಗೂ ಟಿಶರ್ಟ್‍ನ್ನು ಕೊಡುವಂತೆ ಮನವಿ ಮಾಡಲಾಗಿದೆ ಎಂದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಜಿ.ಪಂ.ಉಪ ಕಾರ್ಯದರ್ಶಿ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Intro:ಶಿವಮೊಗ್ಗ,

ಡಿಸೆಂಬರ್ ಮಾಸಾಂತ್ಯದೊಳಗಾಗಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
         
ಜಿಲ್ಲಾಡಳಿತವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಡಿಸೆಂಬರ್ ಮಾಸಾಂತ್ಯದೊಳಗಾಗಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
          ತಮ್ಮ ಕಚೇರಿ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗುಂಪು ಹಾಗೂ ವೈಯಕ್ತಿಕ ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದ ಅವರು, ಈ ಕ್ರೀಡಾಕೂಟದ ಯಶಸ್ವಿಗೆ ಸರ್ಕಾರದ ಎಲ್ಲಾ ಇಲಾಖೆಗಳ ಅಗತ್ಯ ಸಹಕಾರ ನೆರವು ಒದಗಿಸಲು ಸೂಚಿಸಲಾಗುವುದು ಎಂದವರು ನುಡಿದರು.
         2ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 3,000ಕ್ಕೂ ಹೆಚ್ಚಿನ ನೌಕರ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಅಗತ್ಯ ಊಟೋಪಹಾರದ ವ್ಯವಸ್ಥೆ ಒದಗಿಸಲಾಗುವುದಲ್ಲದೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಳುಗಳಿಗೆ ಇಲಾಖೆಯ ಅನುಮತಿ ನೀಡಲು ಕ್ರಮವಹಿಸಲಾಗುವುದು ಎಂದವರು ನುಡಿದರು.
         ನಡೆಯುವ ಎಲ್ಲಾ ಸ್ಪರ್ಧೆಗಳು ಪಾರದರ್ಶಕವಾಗಿ ಹಾಗೂ ವಿವಾದರಹಿತವಾಗಿ ನಡೆಯಲು ಅನುಕೂಲವಾಗುವಂತೆ ವಿಷಯ ಪರಿಣಿತರನ್ನು ತೀರ್ಪುಗಾರರನ್ನಾಗಿ ಆಹ್ವಾನಿಸಲಾಗುವುದು ಎಂದ ಅವರು ಈ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಲು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಕ್ಕೆ ನಿಯಮಾನುಸಾರ ಮಾನ್ಯ ಮುಖ್ಯಮಂತ್ರಿಗಳು, ಕ್ರೀಡಾ ಸಚಿವರು, ಜಿಲ್ಲೆಯ ಜನಪ್ರತಿಗಳು, ಅಧಿಕಾರಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.
         ಈ ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈ ಬಾರಿಯ ಕ್ರೀಡಾಕೂಟವನ್ನು ವೈಶಿಷ್ಟ್ಯಪೂರ್ಣವಾಗಿ ಏರ್ಪಡಿಸಲು ಕೋರಲಾಗಿದ್ದು, ಭಾಗವಹಿಸುವ ಸ್ಪರ್ಧಿಗಳಿಗೆ ಕ್ಯಾಪ್ ಹಾಗೂ ಟೀಷರ್ಟ್‍ನ್ನು ಕೊಡುವಂತೆ ಮನವಿ ಮಾಡಲಾಗಿದೆ. ಅದಕ್ಕಾಗಿ ಮಾನ್ಯ ಜಿಲ್ಲಾಧಿಕಾರಿಗಳ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದವರು ನುಡಿದರು.
         ಈ ಕ್ರೀಡಾಕೂಟದ ಮೊದಲ ದಿನ ಸದಾ ನೆನಪಿನಲ್ಲುಳಿಯುವಂತೆ ಹಾಗೂ ಕ್ರೀಡಾಕೂಟಕ್ಕೆ ಆಗಮಿಸುವ ನೌಕರರು, ಅವರ ಕುಟುಂಬದ ಅವಲಂಬಿತರು ಹಾಗೂ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ರಾಜ್ಯ ಮಟ್ಟದ ಖ್ಯಾತ ಕಲಾವಿದರನ್ನು ಆಹ್ವಾನಿಸಿ ರಸಸಂಜೆ ಕಾರ್ಯಕ್ರಮವನ್ನು ಏರ್ಪಡಿಸಲು ಕ್ರಮ ವಹಿಸಲಾಗುವುದು. ಅಲ್ಲದೇ ಆಕರ್ಷಕ ಸ್ಮರಣಿಕೆಯನ್ನು ನೀಡಲು ಕೋರಿಕೆ ಸಲ್ಲಿಸಲಾಗಿದೆ ಎಂದರು.
         ಕ್ರೀಡಾಕೂಟದ ಎಲ್ಲಾ ಸಂದರ್ಭದಲ್ಲಿಯೂ ನೌಕರರ ಸಂಘದ ಪದಾಧಿಕಾರಿಗಳು ಸಕ್ರಿಯರಾಗಿ ಭಾಗವಹಿಸಿ ಕ್ರೀಡಾಕೂಟದ ಯಶಸ್ಸಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದವರು ನುಡಿದರು.
         ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ, ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಜಿ.ಪಂ.ಉಪಕಾರ್ಯದರ್ಶಿ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.