ETV Bharat / state

ವೈಯಕ್ತಿಕ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಿ: ಸಂಸದ ಬಿ.ವೈ.ರಾಘವೇಂದ್ರ

author img

By

Published : Nov 12, 2020, 9:14 PM IST

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಗರ ಭಾಗದಲ್ಲಿ 5,085 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, 4,624 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

MP B Y Raghavendra
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೈಯಕ್ತಿಕ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಿ: ಸಂಸದ ಬಿ.ವೈ.ರಾಘವೇಂದ್ರ

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಠಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದರು.

ಗ್ರಾಮ ಜ್ಯೋತಿ ಯೋಜನೆ:

ದೀನ ದಯಾಳ್ ಉಪಾಧ್ಯಾಯ್ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದ್ದೀಕರಣ, ಫೀಡರ್ ಬೇರ್ಪಡಿಸುವಿಕೆ ಮತ್ತು ಹೊಸ ಮೀಟರ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಮೀಟರ್ ಅಳವಡಿಸಲು ಹಣಕ್ಕೆ ಬೇಡಿಕೆ ಇಡುವಂತಹ ದೂರುಗಳು ಬರಬಾರದು. ಯೋಜನೆ ಅನುಷ್ಠಾನ ಪರಿಶೀಲಿಸಲು ಸಮಿತಿಯ ಸದಸ್ಯರು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಸದರು ಸೂಚಿಸಿದರು. ಮೆಸ್ಕಾಂ ಕುರಿತಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೆಸ್ಕಾಂ ಎಂಡಿಯವರನ್ನು ಜಿಲ್ಲೆಗೆ ಕರೆಯಿಸಿ ಸಭೆ ನಡೆಸಲಾಗುವುದು ಎಂದರು.

ಪಿಎಂಜಿಎಸ್‌ವೈ:

ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ನಿರ್ಮಿಸಿರುವ ರಸ್ತೆಗಳ ನಿರ್ವಹಣೆಯನ್ನು 5 ವರ್ಷಗಳ ಕಾಲ ಗುತ್ತಿಗೆದಾರರು ನಿರ್ವಹಿಸಬೇಕಾಗಿದೆ. ಮರು ಡಾಂಬರೀಕರಣ ಸೇರಿದಂತೆ ನಿರ್ವಹಣೆಯನ್ನು ಸಮರ್ಪಕವಾಗಿ ನಡೆಸುವಂತೆ ಸೂಚಿಸಬೇಕು ಎಂದು ಹೇಳಿದರು.

ಉದ್ಯೋಗ ಖಾತ್ರಿ ಯೋಜನೆ:

ಜಿಲ್ಲೆಯಲ್ಲಿ ಎನ್‌ಆರ್‌ಇಜಿ ಅಡಿ ಪ್ರಸ್ತುತ ವರ್ಷ 45 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 32 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಯೋಜನೆಯಡಿ ಈಗಾಗಲೇ ಅಡಿಕೆ, ಬಾಳೆ, ಕರಿಮೆಣಸು, ನುಗ್ಗೆ, ಹಣ್ಣಿನ ಬೆಳೆಗಳ ಕೃಷಿಯನ್ನು ಸೇರಿಸಲಾಗಿದೆ. ಭತ್ತ ನಾಟಿ ಮಾಡುವಿಕೆ ಸೇರಿದಂತೆ ಮಲೆನಾಡಿನ ಕೃಷಿ ಚಟುವಟಿಕೆಗಳನ್ನು ಈ ಯೋಜನೆಯಡಿ ಸೇರಿಸುವ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಗರ ಭಾಗದಲ್ಲಿ 5,085 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, 4,624 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ 1,612 ಮನೆಗಳಿಗೆ ಅನುಮೋದನೆ ದೊರೆತಿದ್ದು, 658 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣಕ್ಕಾಗಿ 2.48 ಕೋಟಿ ರೂ. ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣ ಕಾರ್ಯ ಸಮರ್ಪಕವಾಗಿ ಅನುಷ್ಠಾನಗೊಳ್ಳುವಂತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.