ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಹೊಸನಗರ ತಾಲೂಕು ಹೊಸಕೊಪ್ಪ ಬಳಿ ನಡೆದಿದೆ.
ಹೊಸನಗರದಿಂದ ಸಿಗಂದೂರು ಮಾರ್ಗವಾಗಿ ಸಾಗುವ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಹೆಚ್ಚಿನ ಹಾನಿಯಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸನಗರದಿಂದ ಸಿಗಂದೂರು ಮಾರ್ಗ ಅತ್ಯಂತ ಕಿರಿದಾಗಿದೆ. ಅಲ್ಲದೆ ರಸ್ತೆಗಳಲ್ಲಿ ಸಾಕಷ್ಟು ತಿರುವುಗಳಿವೆ. ತಿರುವುಗಳಿರುವುದರಿಂದ ಅಪಘಾತ ನಡೆಯುತ್ತವೆ ಎನ್ನಲಾಗಿದೆ.
ಸ್ಥಳಕ್ಕೆ ಕಾರ್ಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ಗಳನ್ನು ರಸ್ತೆ ಬದಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಲಾಗಿದೆ.