ಶಿವಮೊಗ್ಗ: ಇಂದು ಸಾಧು ವಾಸವಾನಿ ಜನ್ಮದಿನದ ನಿಮಿತ್ತ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಮಹಾನಗರಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮಾಂಸದಂಗಡಿ ಮಾಲೀಕರು ತಮ್ಮ ಉದ್ದಿಮೆಯನ್ನು ಒಂದು ದಿನ ಸ್ಥಗಿತಗೊಳಿಸುವಂತೆ ಹಾಗೂ ಆದೇಶವನ್ನು ಉಲ್ಲಂಘಿಸಿ, ಮಾಂಸ ಮಾರಾಟ ಮಾಡುವ ಅಂಗಡಿಗಳ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದು ಸಾಧು ವಾಸವಾನಿ ಜಯಂತಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ