ಶಿವಮೊಗ್ಗ: ನಗರದಲ್ಲಿ ವಿಧಿಸಿದ್ದ ನಿಷೇಧಾಜ್ಞೆ ಅವಧಿಯನ್ನು ಇಂದಿನಿಂದ ಸಡಿಲಿಕೆ ಮಾಡಲಾಗಿದೆ. ಆದರೆ ಮದ್ಯಂಗಡಿಗಳನ್ನು ಮಾತ್ರ ಸಂಜೆ 7 ಗಂಟೆಯೊಳಗೆ ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಉಂಟಾಗಿದ್ದ ಗಲಭೆ, ಕಲ್ಲು ತೂರಾಟದಿಂದಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ-ವಹಿವಾಟಿಗೆ ಅವಕಾಶ ಕಲ್ಪಿಸಲಾಗಿತ್ತು.
ಇದನ್ನೂ ಓದಿ: ಚೊಚ್ಚಲ ಬಜೆಟ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಏನು?