ಶಿವಮೊಗ್ಗ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಕಮಿಟಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು, ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಯನ್ನೆತ್ತುವಂತೆ ಮಾಡಿದೆ. ಈಗಾಗಲೇ ದೇಶದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇದ್ದು, ಇವುಗಳಿಗೆ ಕೊನೆಯಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ದೇಶದಲ್ಲಿ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.