ಶಿವಮೊಗ್ಗ : ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್, ಪ್ರವಾದಿ ಮುಹಮ್ಮದ್ ಪೈಗಂಬರರನ್ನು ನಿಂದಿಸಿರುವುದನ್ನು ಖಂಡಿಸಿ ಸುನ್ನೀ ಜಂಇಯ್ಯತುಲ್ ಉಲಮಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.
ವಿಶ್ವಕ್ಕೆ ಶಾಂತಿ, ಭಾವೈಕ್ಯತೆ, ಜಾತ್ಯಾತೀತ ಮನೋಭಾವನೆ ಹಾಗೂ ಸೌಹಾರ್ದತೆ ಕಲಿಸಿರುವ ಮಹಮ್ಮದ್ ಪೈಗಂಬರರ ಕಾರ್ಟೂನ್ ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ಫ್ರಾನ್ಸ್ ಅಧ್ಯಕ್ಷ ಅವಮಾನಿಸಿದ್ದಾರೆ. ಇದರಿಂದ ಮುಸ್ಲಿಂ ಸಮುದಾಯದವರಿಗೆ ನೋವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಫ್ರಾನ್ಸ್ ಅಧ್ಯಕ್ಷರು ರಾಜೀನಾಮೆ ನೀಡಲು ಒತ್ತಾಯಿಸುವಂತೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.