ETV Bharat / state

ಶಿವಮೊಗ್ಗದಲ್ಲಿ ಸಂಸದ ಅನಂತ್​ ಕುಮಾರ್​ ಹೆಗಡೆ ವಿರುದ್ಧ ಪ್ರತಿಭಟನೆ - Protest by Shimoga District Congress

ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್​ ಹೆಗಡೆ ವಿರುದ್ಧ ಉತ್ತರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್​ ವತಿಯಿಂದ ಪ್ರತಿಭಟನೆ ನಡೆಯಿತು.

Protest against MP Ananth Kumar Heagde in Shimoga
ಶಿವಮೊಗ್ಗದಲ್ಲಿ ಸಂಸದ ಅನಂತ್​ ಕುಮಾರ್​ ಹೆಗಡೆ ವಿರುದ್ಧ ಪ್ರತಿಭಟನೆ
author img

By

Published : Feb 7, 2020, 1:32 PM IST

ಶಿವಮೊಗ್ಗ : ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್​ ಹೆಗಡೆ ವಿರುದ್ಧ ಜಿಲ್ಲಾ ಉತ್ತರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್​ ವತಿಯಿಂದ ಪ್ರತಿಭಟನೆ ನಡೆಯಿತು.

ಶಿವಮೊಗ್ಗದಲ್ಲಿ ಸಂಸದ ಅನಂತ್​ ಕುಮಾರ್​ ಹೆಗಡೆ ವಿರುದ್ಧ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್​ ಭವನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್​ ಕಾರ್ಯಕರ್ತರು, ಬಾಲರಾಜ್ ಅರಸ್​ ರಸ್ತೆಯ ಮೂಲಕ ಸಾಗಿ ಬಂದು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಸಂಸದ ಅನಂತ್​ ಕುಮಾರ್​ ಹೆಗಡೆ, ಗಾಂಧೀಜಿಯವರ ಸ್ವಾತಂತ್ಯ ಸತ್ಯಾಗ್ರಹವನ್ನು ವ್ಯಂಗ್ಯ ಮಾಡಿ ಗಾಂಧೀಜಿಯವರಿಗೆ ಅವಮಾನ ಮಾಡಿದ್ದಾರೆ. ಅಲ್ಲದೆ ಗಾಂಧೀಜಿ ಹತ್ಯಾ ಪ್ರಕರಣದ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಅನಂತ್​ ಕುಮಾರ್​ ಹೆಗಡೆಯವರನ್ನು ತಕ್ಷಣ ಸಂಸತ್​ ಸದಸ್ಯ ಸ್ಥಾನದಿಂದ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್​ ಹೆಗಡೆ, ಉತ್ತರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್​ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.