ಶಿವಮೊಗ್ಗ : ಶಿರಾಳಕೊಪ್ಪ ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ.
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಕಾರ್ಯ ಪಾಲನಾ ಉಪ ವಿಭಾಗ ಶಿರಾಳಕೊಪ್ಪ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಹಾಗೂ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣ ಮಾಡುತ್ತಿರುವ ನೀತಿ ರೈತರ, ಜನ ಸಾಮಾನ್ಯರ ವಿರೋಧಿಯಾಗಿದೆ. ಅಷ್ಟೇ ಅಲ್ಲ, ವಿದ್ಯುತ್ ಕ್ಷೇತ್ರದ ನೌಕರರಿಗೂ ಮರಣ ಶಾಸನವಾಗಿರುವ ಈ ನೀತಿಯನ್ನು ಜಾರಿಗೆ ತರಬಾರದು ಎಂಬ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗಿದೆ.