ಶಿವಮೊಗ್ಗ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಅನೇಕ ದಿನಗಳಿಂದ ಹೋರಾಟ ಮಾಡುತ್ತಾ ಬಂದರೂ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲ. ಈ ಹಿನ್ನೆಲೆ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದೇವೆ. ಕೊರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಬಿಸಿಯೂಟ ನೌಕರರಿಗೆ ಸುರಕ್ಷತಾ ಪರಿಕರಗಳನ್ನು ನೀಡಬೇಕು. ಅಷ್ಟೇ ಅಲ್ಲ, ₹7500 ವೇತನ ನೀಡಬೇಕು. ಏಪ್ರಿಲ್ನಿಂದ ವೇತನ ಬಂದಿಲ್ಲ. ಅದನ್ನು ಆದಷ್ಟು ಬೇಗ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ಬಿಸಿಯೂಟ ನೌಕರರಿಗೆ ಕನಿಷ್ಠ 6 ತಿಂಗಳವರೆಗೆ ಪಡಿತರವನ್ನು ಒದಗಿಸಬೇಕು. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.