ETV Bharat / state

ಶಿವಮೊಗ್ಗ: ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ಬಂದ ನಂತರದಲ್ಲಿ ಸಂಸದರು, ಶಾಸಕರು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

author img

By

Published : Aug 12, 2020, 4:22 PM IST

ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಶಿವಮೊಗ್ಗ: ಸಚಿವ ಈಶ್ವರಪ್ಪ ಹಾಗೂ ಸಂಸದ ಅನಂತ ಕುಮಾರ ಹೆಗಡೆ ಅವರನ್ನು ಕೂಡಲೇ ಪಕ್ಷದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

ಬಿಎಸ್​ಎನ್​ಎಲ್ ಸಂಸ್ಥೆ ಹಾಗೂ ನೌಕರರ ಬಗ್ಗೆ ಸಂಸದ ಅನಂತ ಕುಮಾರ ಹೆಗಡೆ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಎಸ್​ಎನ್​ಎಲ್ ಅನ್ನು ಖಾಸಗೀಕರಣ ಮಾಡಲಾಗುವುದು ಎಂದು ಹೇಳಿಕೆ ನೀಡಿರುವುದು ಖಂಡನೀಯ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ಬಂದ ನಂತರದಲ್ಲಿ ಸಂಸದರು, ಶಾಸಕರು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವ ಈಶ್ವರಪ್ಪನವರು ಸಹ ಧರ್ಮ-ಧರ್ಮಗಳ ಮಧ್ಯೆ ಕೋಮುವಾದ ಹುಟ್ಟು ಹಾಕುವ ಹಾಗೂ ಬೇರೆ ಧರ್ಮಗಳನ್ನು ನಿಂದಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ಕೂಡಲೇ ಸಚಿವ ಈಶ್ವರಪ್ಪ ಮತ್ತು ಸಂಸದ ಅನಂತ ಕುಮಾರ ಹೆಗಡೆ ಅವರನ್ನು ಪಕ್ಷದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.