ETV Bharat / state

ಒಳಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ - ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಂದಿನ ವಿಧಾನಸಭೆಯ ಅಧಿವೇಶನದಲ್ಲಿ ಒಳಮೀಸಲಾತಿ ಕಾಯ್ದೆ ಜಾರಿಗೊಳಿಸಿ, ಸರ್ಕಾರಿ ಆದೇಶವನ್ನು ಹೊರಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Protest demanding the implementation of the Reservation Act
ಒಳಮೀಸಲಾತಿ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
author img

By

Published : Sep 5, 2020, 11:24 PM IST

ಶಿವಮೊಗ್ಗ: ಒಳಮೀಸಲಾತಿ ಕಾಯ್ದೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸುತ್ತಲೇ ಬಂದಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಸದಾಶಿವ ಆಯೋಗ ವರದಿ ಸರ್ಕಾರಕ್ಕೆ ತಲುಪಿದ್ದರೂ ಕೂಡ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಸದನದಲ್ಲಿ ಮಂಡಿಸಿ, ಒಳ ಮೀಸಲಾತಿ ಕಾಯ್ದೆ ಜಾರಿಗೊಳಿಸಿಲ್ಲ. ಜೊತೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ನೀಡಿಲ್ಲ.

ಹೀಗಾಗಿ ರಾಜ್ಯ ಸರ್ಕಾರವು ಮುಂದಿನ ವಿಧಾನಸಭೆಯ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ, ಒಳಮೀಸಲಾತಿ ಕಾಯ್ದೆ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.