ETV Bharat / state

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

author img

By

Published : Sep 19, 2020, 5:04 PM IST

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕಾಗಿದೆ. ಈ ಸಮುದಾಯವು ದೇಶದ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಕರ್ನಾಟಕದಲ್ಲಿ ಮಾತ್ರ ಕುರುಬ ಸಮುದಾಯವು ಮೀಸಲಾತಿಯಿಂದ ವಂಚಿತವಾಗಿದೆ..

Protest demanding the reservation to kuruba community
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಶೇ. 9ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್​ಟಿ)ಗೆ ಸೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಾಲುಮತ ಮಹಾಸಭಾದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕುರುಬ ಸಮಾಜವು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ. ಹಾಗೂ ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ ಬುಡಕಟ್ಟು ಸಂಸ್ಕೃತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕಾಗಿದೆ. ಈ ಸಮುದಾಯವು ದೇಶದ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಕರ್ನಾಟಕದಲ್ಲಿ ಮಾತ್ರ ಕುರುಬ ಸಮುದಾಯವು ಮೀಸಲಾತಿಯಿಂದ ವಂಚಿತವಾಗಿದೆ.

ಹಾಗಾಗಿ, ಮುಖ್ಯಮಂತ್ರಿಗಳು ಪರಿಶಿಷ್ಟ ಪಂಗಡ ಮೀಸಲಾತಿಗೆ ಕುರುಬ ಸಮಾಜ ಸೇರಿಸುವ ಮೂಲಕ ಮೀಸಲಾತಿ ಪ್ರಮಾಣವನ್ನು ಶೇಕಡಾ 9ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.