ETV Bharat / state

ಸರ್ಕಾರಿ & ಖಾಸಗಿ ಶಾಲಾ ಶುಲ್ಕಗಳನ್ನು ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ - ಶಾಲಾ ಶುಲ್ಕಗಳನ್ನು ಮನ್ನಾ ಮಾಡುವಂತೆ ಪ್ರತಿಭಟನೆ

ಸರ್ಕಾರಿ ಮತ್ತು ಖಾಸಗಿ ಶಾಲಾ ಶುಲ್ಕಗಳನ್ನು ಮನ್ನಾ ಮಾಡುವಂತೆ ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ
ಪ್ರತಿಭಟನೆ
author img

By

Published : Sep 18, 2020, 11:05 PM IST

ಶಿವಮೊಗ್ಗ: ಸರ್ಕಾರಿ ಮತ್ತು ಖಾಸಗಿ ಶಾಲಾ ಶುಲ್ಕಗಳನ್ನು ಮನ್ನಾ ಮಾಡುವಂತೆ ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೊರೊನಾ ಮಹಾಮಾರಿಯಿಂದಾಗಿ ಅನೇಕ ಜನರು ಉದ್ಯೋಗ ಕಳೆದುಕೊಂಡು ಆದಾಯವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳ ಶಾಲಾ ಶುಲ್ಕ ಕಟ್ಟಲು ಆಗದೇ ಪರದಾಡುತ್ತಿದ್ದಾರೆ.

ಸರ್ಕಾರ ಪೋಷಕರ ನೆರವಿಗೆ ನಿಲ್ಲುವುದು ಸಾಮಾಜಿಕ ಹಾಗೂ ನೈತಿಕ ಹೊಣೆ. ಹಾಗಾಗಿ ಖಾಸಗಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳ ಶುಲ್ಕಗಳನ್ನು ಮನ್ನಾ ಮಾಡುವ ಮೂಲಕ ಜನರ ನೆರವಿಗೆ ನಿಲ್ಲಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.