ETV Bharat / state

ವಿದ್ಯಾಸಿರಿ ವೇತನದ ಅರ್ಜಿ ತಿರಸ್ಕಾರ: ಎಬಿವಿಪಿಯಿಂದ ಪ್ರತಿಭಟನೆ - ವಿದ್ಯಾಸಿರಿ ವಿದ್ಯಾರ್ಥಿ ವೇತನದ ಅರ್ಜಿ

ಆಧಾರ್​ ಮಾಹಿತಿ ಸರಿ ಹೊಂದುತ್ತಿಲ್ಲ ಎಂಬ ಮಾಹಿತಿ ನೀಡಿ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಅರ್ಜಿ ತಿರಸ್ಕರಿಸಿದ ಹಿನ್ನೆಲೆ ಇಂದು ಎಬಿವಿಪಿ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

protest from ABVP
ಎಬಿವಿಪಿಯಿಂದ ಪ್ರತಿಭಟನೆ
author img

By

Published : Dec 12, 2019, 11:21 PM IST

ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಆಧಾರ್ ಮಾಹಿತಿ ಸರಿ ಹೊಂದದ ಕಾರಣ ನೀಡಿ, ಅರ್ಜಿ ತಿರಸ್ಕರಿಸಿರುವುದನ್ನ ಹಿಂಪಡೆಯಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮೆಟ್ರಿಕ್ ನಂತರದ ವಿದ್ಯಾಸಿರಿ ವೇತನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಕ್ಟೋಬರ್ ತಿಂಗಳಿನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ಈ ವರ್ಷ 8.5 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ವಿದ್ಯಾರ್ಥಿಗಳ ಆದಾರ್ ಮಾಹಿತಿ ಸರಿ ಹೊಂದುತ್ತಿಲ್ಲ ಎಂಬ ಕಾರಣ ನೀಡಿ ಸುಮಾರು 58 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳ ಶಿಷ್ಯವೇತನ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಎಬಿವಿಪಿಯಿಂದ ಪ್ರತಿಭಟನೆ

ವಿದ್ಯಾರ್ಥಿ ವೇತನವನ್ನು ನಂಬಿಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ. ಆದ್ದರಿಂದ ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಮತ್ತು ತಿರಸ್ಕಾರ ಮಾಡಿರುವ ಎಲ್ಲಾ ವಿದ್ಯಾರ್ಥಿಗಳ ವಿದ್ಯಾಸಿರಿ ವೇತನ ಅರ್ಜಿಗಳನ್ನು ಸ್ವೀಕರಿಸಿ, ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

Intro:ಶಿವಮೊಗ್ಗ,
ಮೆಟ್ರಿಕ್ ನಂತರದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಅರ್ಜಿಗಳನ್ನು ಆಧಾರ್ ಮಾಹಿತಿ ಸರಿಹೊಂದದ ಕಾರಣ ನೀಡಿ ಅರ್ಜಿ ತಿರಸ್ಕರಿಸಿರುವುದನ್ನ ಹಿಂಪಡೆಯ ಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಮೆಟ್ರಿಕ್ ನಂತರದ ವಿದ್ಯಾಸಿರಿ ವೇತನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಕ್ಟೋಬರ್ ತಿಂಗಳಿನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಆದರಂತೆ ಈ ವರ್ಷ 8.5 ಲಕ್ಷಕ್ಕಿಂತ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದರು, ಆದರೆ ವಿದ್ಯಾರ್ಥಿಗಳ ಆದಾರ್ ಮಾಹಿತಿ ಸರಿ ಹೊಂದುತ್ತಿಲ್ಲ ಎಂಬ ಕಾರಣ ನೀಡಿ ಸುಮಾರು 58 ಸಾವಿರ ಕ್ಕಿಂತ ಹೆಚ್ಚು ವಿದ್ಯಾರ್ಥಿಗಳ ಸ್ಕಾಲರ್ಷಿಪ್ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ಆಧಾರ್ ಕಾರ್ಡ್ ನಲ್ಲಿರುವ ಮಾಹಿತಿಗೂ 10ನೇ ತರಗತಿಯ ಅಂಕಪಟ್ಟಿಯ ಮಾಹಿತಿಗೂ ಸರಿ ಹೊಂದುತ್ತಿಲ್ಲ, ಅಪ್ಡೇಟ್ ಮಾಡಿ ಎಂದು ವಿದ್ಯಾರ್ಥಿಗಳಿಗೆ ಫೋನ್ ಮೂಲಕ ಮೆಸೇಜ್ ಗಳನ್ನು ಕಳಿಸುತ್ತಿದ್ದಾರೆ.
ಆದರೆ ಆಧಾರ್ ಕಾರ್ಡ್ ನಲ್ಲಿ ಮಾಹಿತಿ ಸರಿಮಾಡುವುದು ಕನಿಷ್ಠ 15 ದಿನಗಳಾದರೂ ಬೇಕಾಗುವ ಕಾರಣ ಬಹಳ ವಿದ್ಯಾರ್ಥಿಗಳಿಗೆ
ಅದರ್ ಮಾಹಿತಿ ಸರಿಪಡಿಸಲಾಗದೆ ಅಪ್ಡೇಟ್ ಮಾಡಿಸಲು ಸಾಧ್ಯವಾಗದ ಕಾರಣ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗುವ ಭೀತಿ ಎದುರಿಸುತ್ತಿದ್ದಾರೆ. ಹಾಗೂ ವಿದ್ಯಾರ್ಥಿವೇತನವನ್ನು ನಂಬಿಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ಅನೇಕ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ತೊಂದರೆಯಾಗುತ್ತದೆ. ಆದ್ದರಿಂದ ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೂಡಲೇ ಕ್ರಮವನ್ನು ಕೈಗೊಳ್ಳಬೇಕು ಮತ್ತು ತಿರಸ್ಕಾರ ಮಾಡಿರುವ ಎಲ್ಲಾ ವಿದ್ಯಾರ್ಥಿಗಳ ವಿದ್ಯಾಸಿರಿ ವಿದ್ಯಾರ್ಥಿವೇತನ ಅರ್ಜಿಗಳನ್ನು ಸ್ವೀಕರಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

ಬೈಟ್- ಸ್ವಾತಿ ವಿದ್ಯಾರ್ಥಿನಿ
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.