ಶಿವಮೊಗ್ಗ: ತಾಲೂಕು ಪುರದಾಳು ಗ್ರಾಮದ ಭೂ ವಿವಾದಕ್ಕೆ ಸಂಬಂಧಿಸಿದಂತೆ ಅನ್ಯಾಯಕ್ಕೆ ಒಳಗಾದವರ ಪರ ಹೋರಾಟ ನಡೆಸಿದ ಡಿ ಎಸ್ ಎಸ್ ನ ಮುಖಂಡ ಹಾಲೇಶಪ್ಪ ಹಾಗೂ ಪದಾಧಿಕಾರಿಗಳ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು,ಇದನ್ನು ಕೈ ಬಿಡುವಂತೆ ಜಿಲ್ಲಾ ಪೊಲೀಸ್ ಕಚೇರಿ ಎದುರು ಪ್ರತಿಭಟಿಸಲಾಗಿದೆ.
ದಲಿತರ ಪರವಾಗಿ ಹೋರಾಟ ನಡೆಸುವವರ ವಿರುದ್ದ ದೂರು ದಾಖಲಿಸಿ, ಹೋರಾಟಗಾರರನ್ನು ಹತ್ತಿಕ್ಕುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡುವ ಉದ್ದೇಶವನ್ನು ಹೊಂದಿರುವವರ ಪರವಾಗಿ ಪೊಲೀಸ್ ಇಲಾಖೆ ವರ್ತಿಸುತ್ತಿದೆ ಎಂದು ಆರೋಪಿಸಿ, ಈ ಕೂಡಲೇ ಡಿ ಎಸ್ ಎಸ್ ಮುಖಂಡರ ವಿರುದ್ದ ದಾಖಲಾಗಿರುವ ದೂರನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಸ್ಥಳಕ್ಕೆ ಬಂದ ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ ಈ ಕುರಿತು ಸೂಕ್ತ ಕ್ರಮ ತೆಗೆದು ಕೊಳ್ಳುವ ಭರವಸೆ ನೀಡಿದ ಮೇಲೆ ಪ್ರತಿಭಟನೆಯನ್ನು ವಾಪಸ್ ಪಡೆದುಕೊಳ್ಳಲಾಯಿತು.