ಶಿವಮೊಗ್ಗ: ಬೆಂಗಳೂರಿನ ಮಿಂಟೊ ಆಸ್ಪತ್ರೆ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಭಾರತೀಯ ವೈದ್ಯಕೀಯ ಸಂಘದ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ನಂತರ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ರು.
ಈ ರೀತಿಯಾಗಿ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದರೆ, ವೈದ್ಯರು ಕರ್ತವ್ಯ ನಿರ್ವಹಿಸಲು ಹೇಗೆ ಸಾಧ್ಯವಾಗುತ್ತದೆ? ವೈದ್ಯರು ರೋಗಿಗಳ ಜೊತೆ ಉತ್ತಮವಾಗಿ ವ್ಯವಹಿಸರ ಸಾಧ್ಯವಾಗುವುದಿಲ್ಲ. ಇಂತಹ ಘಟನೆಗಳಿಂದ ವೈದ್ಯರ ಆತ್ಮಸ್ಥೈರ್ಯ ಕುಗ್ಗುತ್ತದೆ. ವೈದ್ಯರ ಮೇಲಿನ ಹಲ್ಲೆ ನಡೆದು ಎಂಟು ದಿನಗಳಾದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದರು.
ವೈದ್ಯರ ಮೇಲೆ ಪ್ರತೀ ಭಾರಿ ಹಲ್ಲೆ ನಡೆದಾಗಲೂ ಸರ್ಕಾರ ಕಣ್ಣೀರು ಒರೆಸುವ ಕೆಲಸ ಮಾಡುತ್ತೆ ಅಷ್ಟೇ. ಆದರೆ ಈ ಬಾರಿ ಮಿಂಟೊ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಐಎಂಎ ಪ್ರತಿನಿಧಿಗಳು ಹಾಗೂ ಕಿರಿಯ ವೈದ್ಯರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.