ETV Bharat / state

ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ - ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೋರಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಮತ್ತು ಲಾಕ್​ಡೌನ್ ಅವಧಿಯ ವೇತನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪ್ರತಿಭಟನೆ ನಡೆಸಲಾಯಿತು.

guest lecturers Protest
ಶಿವಮೊಗ್ಗದಲ್ಲಿ ಪ್ರತಿಭಟನೆ
author img

By

Published : Aug 4, 2020, 10:44 PM IST

ಶಿವಮೊಗ್ಗ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಮತ್ತು ಲಾಕ್​ಡೌನ್ ಅವಧಿಯ ವೇತನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಎಸ್​ಡಿಪಿಐ ಸಂಘಟನೆಗಳು ಅತಿಥಿ ಉಪನ್ಯಾಸಕರಿಗೆ ಬೆಂಬಲ ಸೂಚಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊರೊನಾದಿಂದ ಕೆಲಸವು ಇಲ್ಲದೇ ವೇತನವು ಇಲ್ಲದೇ, ಕುಟುಂಬ ನಿರ್ವಹಣೆ ಹೊರೆ ಆಗುತ್ತಿದೆ. ಹಾಗಾಗಿ ಸರ್ಕಾರ ಲಾಕ್​ಡೌನ್ ಅವಧಿಯನ್ನು ಸೇವಾ ಅವಧಿ ಎಂದು ಪರಿಗಣಿಸಿ ವೇತನ ಬಿಡುಗಡೆ ಮಾಡಬೇಕು. ಜೊತೆಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು. ಹೀಗೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ವಿವಿಧ ಸಂಘಟನೆಗಳು ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.