ಶಿವಮೊಗ್ಗ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಲಾಕ್ಡೌನ್ ಸಂದರ್ಭದಲ್ಲಿ ಕೇಲಸ ಕಳೆದುಕೊಂಡ ಬಡ ಕಾರ್ಮಿಕರಿಗೆ ಸರ್ಕಾರ ಸಹಾಯ ಹಸ್ತ ಚಾಚಬೇಕು ಹಾಗೂ ಕೈಗಾರಿಕೆಗಳ ಖಾಸಗೀಕರಣ ನಿಲ್ಲಿಸಬೇಕು, ಬಿಸಿಯೂಟ ನೌಕರರಿಗೆ ಕನಿಷ್ಠ 6 ತಿಂಗಳವರೆಗೆ ಪಡಿತರವನ್ನು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದಲ್ಲದೆ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಎಂಪಿಎಂ ಹಾಗೂ ವಿಐಎಸ್ಎಲ್ ಕೈಗಾರಿಕೆಗಳನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು ಎಂದು ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.