ಶಿವಮೊಗ್ಗ: ಧಾರವಾಡ ಜಿಲ್ಲೆಯಲ್ಲಿ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಷೀರ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪೊಲೀಸರು ಮತ್ತು ಮಾಧ್ಯಮದವರ ಮೇಲೆ ಹಲ್ಲೆ ಮಾಡಿರುವ ಪುಂಡರನ್ನು ಶೀಘ್ರವೇ ಬಂಧಿಸಬೇಕು ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಒತ್ತಾಯಿಸಿದರು.