ETV Bharat / state

ಸರ್ಕಾರಿ ನೌಕರರ ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಸಹಕಾರ; ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಶಿವಮೊಗ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಸಮಸ್ಯೆಗಳನ್ನು ಬಗೆಹರಿಸಿ, ಸಿಬ್ಬಂದಿಗಳ ಹಿತ ಕಾಯುವಲ್ಲಿ ಎಲ್ಲಾ ರೀತಿಯ ಸಹಾಕಾರ ನೀಡುವುದಾಗಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್​ ಹೇಳಿದ್ದಾರೆ.

DC K.B Shivakumar
ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆ
author img

By

Published : Aug 26, 2020, 7:26 PM IST

ಶಿವಮೊಗ್ಗ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಹಿತ ಕಾಯುವಲ್ಲಿ, ವೇತನ, ಭತ್ಯೆ, ಬಡ್ತಿ ಮತ್ತಿತರ ವಿಷಯಗಳಲ್ಲಿನ ನ್ಯೂನತೆಗಳನ್ನು ಸರಿಪಡಿಸುವಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಭರವಸೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮೊದಲ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೇಳಿಬರುತ್ತಿರುವ ಅರಣ್ಯ, ಆರೋಗ್ಯ ಮತ್ತು ಪಂಚಾಯತ್‍ರಾಜ್ ಇಲಾಖಾ ನೌಕರರ ಮೇಲಿನ ಹಲ್ಲೆಗಳ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಕರ್ತವ್ಯನಿರತ ಅಧಿಕಾರಿ ಹಾಗೂ ನೌಕರರ ಮೇಲೆ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಮೂಲಕ ಸರ್ಕಾರಿ ನೌಕರರು ನಿರ್ಭೀತಿಯಿಂದ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುವುದು. ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಹಾಗೂ ದೌರ್ಜನ್ಯ ಎಸಗುವ ಪುಂಡರ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಎಂದರು.

ಜಿಲ್ಲಾ ಮಟ್ಟದ ಇಲಾಖಾ ಮುಖ್ಯಸ್ಥರು ಕೆಲವು ವೃಂದಗಳ ಹುದ್ದೆಗಳಿಗೆ ಮುಂಬಡ್ತಿ, ಪದೋನ್ನತಿ ನೀಡುವಲ್ಲಿ ಇರುವ ವಿಳಂಬವನ್ನು ಸರಿಪಡಿಸಲು ಹಾಗೂ ತಾಲೂಕು ಮಟ್ಟದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಸಭೆ ಕರೆದು ಸಕಾಲದಲ್ಲಿ ಜೇಷ್ಠತಾಪಟ್ಟಿಯನ್ನು ಪ್ರಕಟಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ವರದಿ ಪಡೆದು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ, ಕಂದಾಯ, ಸಮಾಜ ಕಲ್ಯಾಣ ಹಾಗೂ ಸಂಬಂಧಿಸಿದ ಕೆಲವು ಇಲಾಖೆಗಳ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಅವರ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಇನ್ನಷ್ಟು ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಕರ್ತವ್ಯದಲ್ಲಿ ತೊಡಗಿರುವ ಎಲ್ಲಾ ಇಲಾಖೆಯ ಅಧಿಕಾರಿ ಹಾಗೂ ನೌಕರರಿಗೆ ರಕ್ಷಣೆ ನೀಡುವುದರ ಜೊತೆಗೆ ಗೌರವದಿಂದ ನಡೆಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.