ಶಿವಮೊಗ್ಗ: ನಗರದ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರಂಟೈನ್ ನಿಯಮ ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 10 ಕಂಟೈನ್‍ಮೆಂಟ್ ವಲಯಗಳನ್ನು ಈಗಾಗಲೇ ಘೋಷಿಸಲಾಗಿದೆ. ಅಲ್ಲಿನ ನಿವಾಸಿಗಳು ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸದೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಅಲ್ಲದೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ಅನ್ನು ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ಕುರಿತು ಅರಿವು ಮೂಡಿಸುವುದರ ಜತೆಗೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಮತ್ತು ಮಾಸ್ಕ್ ಧರಿಸದವರಿಗೆ ಜಿಲ್ಲಾಧಿಕಾರಿ ಕಚೇರಿ ಪ್ರವೇಶಕ್ಕೆ ಅವಕಾಶ ನೀಡಬಾರದು ಡಿಸಿ ಸೂಚನೆ ನೀಡಿದರು.
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿರುವ ದೂರುಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಅವರು, ಅಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.