ಶಿವಮೊಗ್ಗ: ಜಿಲ್ಲೆಯ ಡಿಸಿಐಬಿ ಪೊಲೀಸರು ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿ ಬೃಹತ್ ಮೊತ್ತದ ಹಣ ವಶಪಡಿಸಿಕೊಂಡಿದ್ದಾರೆ.
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ರಟ್ಟೆಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಇಸ್ಪೀಟ್ ಆಟ ನಡೆಯುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ 12 ಲಕ್ಷ ಕ್ಕೂ ಹೆಚ್ಚು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಜೂಜಿಗಿಟ್ಟಿದ್ದ ಹಣದ ಜೊತೆ 11 ಮೊಬೈಲ್ಗಳನ್ನೂ ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.