ಶಿವಮೊಗ್ಗ: ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನ ಬೋಗಿಗಳ ಸಂಖ್ಯೆ ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ.
ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರೊಂದಿಗೆ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಬೋಗಿಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದರು.
ಈ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ ಸಂಜೆ ವೇಳೆಗೆ ರೈಲು ಸಂಖ್ಯೆ 16227 ಮತ್ತು 16228 ಮೈಸೂರು -ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೆ ಎರಡು ಸ್ಲೀಪರ್ ಕೋಚ್ಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಆಗಸ್ಟ್ 26ರಿಂದ ತಾಳಗುಪ್ಪದಿಂದ ಹೊರಡುವ ರೈಲಿನಲ್ಲಿ ಎರಡು ಹೆಚ್ಚುವರಿ ಸ್ಲೀಪರ್ ಕೋಚ್ ಇರಲಿದೆ. ಮರುದಿನ ಮೈಸೂರಿನಿಂದ ಹೊರಡುವ ರೈಲಿನಲ್ಲಿ ಎರಡು ಹೆಚ್ಚುವರಿ ಸ್ಲೀಪರ್ ಕೋಚ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.