ಶಿವಮೊಗ್ಗ: ಕಳೆದ ಕೆಲ ತಿಂಗಳ ಹಿಂದೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ನಿನ್ನೆ ರಾತ್ರಿ ನಿಧನರಾಗದ್ದಾರೆ.ಅವರ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಸಂತಾಪ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಡೀ ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸಾಮಾನ್ಯ ಕಾರ್ಯಕರ್ತ ಸಹ ರಾಜ್ಯಸಭಾ ಸದಸ್ಯ ಆಗಬಹುದು ಎಂಬುದನ್ನು ತೋರಿಸಿಕೊಟ್ಟವರು ಅಶೋಕ್ ಗಸ್ತಿ. ಆದರೆ ಇಂದು ಅವರು ನಮ್ಮೊಂದಿಗಿಲ್ಲ. ಅವರ ಸಾವಿನ ಸುದ್ದಿ ಕೇಳಿ ದಿಗ್ಬ್ರಮೆ ಆಗಿದೆ ಎಂದಿದ್ದಾರೆ.
ಡೆಡ್ಲಿ ಕೊರೊನಾ ಸೋಂಕಿಗೆ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಬಲಿ
ರಾಜ್ಯಸಭಾ ಸದಸ್ಯರಾಗುವ ಮೂಲಕ ಎಲ್ಲರಿಗೂ ಪ್ರೇರಣೆ ಆಗಿದ್ದರು. ಸದಾ ಚಟುವಟಿಕೆಯಿಂದ ಇರುವ ವ್ಯಕ್ತಿಯಾಗಿದ್ದ ಅವರು, ಹೋರಾಟದ ಮೂಲಕ ಇಡೀ ಜೀವನ ಮುಡುಪಾಗಿಟ್ಟಿದ್ದರು.ರಾಯಣ್ಣ ಬ್ರಿಗೇಡ್ನಲ್ಲಿ ಇಡೀ ಉತ್ತರ ಕರ್ನಾಟಕದ ತುಂಬ ಓಡಾಡಿದ್ದರು. ಅವರ ಸಾವಿನಿಂದ ದೇಶಕ್ಕೆ ತುಂಬಲಾರದಷ್ಟು ನಷ್ಟವಾಗಿದೆ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.