ETV Bharat / state

ಶಿವಮೊಗ್ಗದಲ್ಲಿ ಡಿ. 9ರಂದು ಮೆಗಾ 'ಲೋಕ ಅದಾಲತ್‌': ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥ

author img

By

Published : Nov 8, 2019, 8:39 PM IST

ಶಿವಮೊಗ್ಗದ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಡಿಸೆಂಬರ್ 14ರಂದು ಮೆಗಾ ಲೋಕ ಅದಾಲತ್‌ ಏರ್ಪಡಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾ. ರೊಳ್ಳೆಕದ್ರಿ ಗಂಗಣ್ಣ

ಶಿವಮೊಗ್ಗ : ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಡಿಸೆಂಬರ್ 14ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ ಲೋಕ ಅದಾಲತ್‌ನ್ನು ಏರ್ಪಡಿಸಲಾಗಿದೆ.

ಈ ಕುರಿತು ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾ. ರೊಳ್ಳೆಕದ್ರಿ ಗಂಗಣ್ಣ, ಈ ಅವಕಾಶವನ್ನು ಬಳಸಿಕೊಂಡು ದೂರುದಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕೆಂದು ತಿಳಿಸಿದರು.

ಮೆಗಾ ಲೋಕ ಅದಾಲತ್‌ ಮೂಲಕ ದಾಖಲಾಗದಿರುವ ವಿವಿಧ ರೀತಿಯ ಪ್ರಕರಣಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲಾಗುವುದು. ಈ ಅದಾಲತ್‌ನಲ್ಲಿ ಬ್ಯಾಂಕುಗಳು, ಟೆಲಿಫೋನ್ ವಿಚಾರಕ್ಕೆ ಸೇರಿದ ಪ್ರಕರಣಗಳನ್ನು ಕೈಗೆತ್ತಿಕೊಂಡು ಇತ್ಯರ್ಥ ಪಡಿಸಲಾಗುವುದು. ಅಲ್ಲದೇ ಅಪಘಾತದಂತಹ ಪ್ರಕರಣಗಳನ್ನು ಕಕ್ಷಿದಾರ ಹಾಗೂ ವಿಮಾ ಕಂಪನಿಗಳ ಮುಖ್ಯಸ್ಥರ ಸಮಕ್ಷಮದಲ್ಲಿ ನಿರ್ಣಯಿಸಲಾಗುವುದು ಎಂದು ತಿಳಿಸಿದ್ರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾ. ರೊಳ್ಳೆಕದ್ರಿ ಗಂಗಣ್ಣ

ಕೌಟುಂಬಿಕ ಪ್ರಕರಣಗಳು, ಚೆಕ್ ಬೌನ್ಸ್, ಸಣ್ಣಪುಟ್ಟ ದೊಂಬಿ ಗಲಾಟೆ ಹಾಗೂ ಕಳ್ಳತನ ಪ್ರಕರಣಗಳನ್ನು ಕೈಗೆತ್ತಿಕೊಂಡು ಬಗೆರಹರಿಸಲಾಗುವುದು. ಇದರಿಂದ ನ್ಯಾಯಾಲಯದಲ್ಲಿ ದಾಖಲಾಗುವ ಮೊಕದ್ದಮೆಗಳ ಸಂಖ್ಯೆ ಇಳಿಮುಖವಾಗಿ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಸಮಯ ಉಳಿತಾಯವಾಗಲಿದೆ ಎಂದರು.

ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಲೋಕ ಅದಾಲತ್‌ನಲ್ಲಿ ಸುಮಾರು 1500ಕ್ಕೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಲಾಗಿದೆ. ಕಳೆದ ಮಾರ್ಚ್ ತಿಂಗಳಿಂದ ಇಲ್ಲಿಯವರೆಗೆ ದಾಖಲಾದ ಪ್ರಕರಣಗಳಲ್ಲಿ 2693 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಕೆ.ಎನ್. ಸರಸ್ವತಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ. ಮಧು ಮತ್ತು ಕಾರ್ಯದರ್ಶಿ ಹೆಚ್.ಬಿ. ದೇವೇಂದ್ರ ಉಪಸ್ಥಿತರಿದ್ದರು.

Intro:ಶಿವಮೊಗ್ಗ,

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನೋಂದಾವಣೆಯಾಗಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರ ಇತ್ಯರ್ಥಗೊಳಿಸಲು ಡಿಸೆಂಬರ್ ೧೪ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟಿಯ ಲೋಕ ಅದಾಲತ್‌ನ್ನು ಏರ್ಪಡಿಸಲಾಗಿದ್ದು, ಈ ಸದವಕಾಶವನ್ನು ಬಳಸಿಕೊಂಡು ದೂರುದಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಾಸ್ಟರ್ ರೊಳ್ಳೆ ಕದ್ರಿ ಗಂಗಣ್ಣ ಮಹಾಮಹಾಸ್ವಾಮೀಜಿ ಅವರು ಹೇಳಿದರು.
         ಅವರು ಇಂದು ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ರಾಷ್ಟಿಯ ಲೋಕ ಅದಾಲತ್ ಬಗ್ಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ರಾಜಿ ಸಂಧಾನ ಮತ್ತು ಮಧ್ಯಸ್ಥಿಕೆಗಳ ಮೂಲಕ ನ್ಯಾಯಾಲಯದಲ್ಲಿ ದಾಖಲಾಗುವ ಹಾಗೂ ದಾಖಲಾಗದಿರುವ ವಿವಿಧ ರೀತಿಯ ಪ್ರಕರಣಗಳನ್ನು ಸೌಹಾರ್ಧಯುತವಾಗಿ ಬಗೆಹರಿಸಲಾಗುವುದು ಎಂದರು.
         ಈ ಅದಾಲತ್‌ನಲ್ಲಿ ಬ್ಯಾಂಕುಗಳು, ಟೆಲಿಫೋನ್ ಮುಂತಾದ ಪ್ರಕರಣಗಳು ಸೇರಿದಂತೆ ಸಾಮಾನ್ಯ ಸ್ವರೂಪದ ವಿವಿಧ ರೀತಿಯ ಪ್ರಕರಣಗಳನ್ನು ಕೈಗೆತ್ತಿಕೊಂಡು ಇತ್ಯರ್ಥಪಡಿಸಲಾಗುವುದು. ಅಲ್ಲದೆ ಮೋಟಾರ್ ವೆಹಿಕಲ್ ಆಕ್ಸಿಡೆಂಟ್‌ನಂತಹ ಪ್ರಕರಣಗಳನ್ನು ಕಕ್ಷಿದಾರ ಹಾಗೂ ವಿಮಾ ಕಂಪನಿಗಳ ಮುಖ್ಯಸ್ಥರ ಸಮಕ್ಷಮದಲ್ಲಿ ನಿರ್ಣಯಿಸಲಾಗುವುದು ಎಂದರು.
         ಇದಲ್ಲದೇ ಇತ್ಯರ್ಥಪಡಿಸಬಹುದಾದ ಕೌಟುಂಬಿಕ ಪ್ರಕರಣಗಳು, ಚೆಕ್ ಬೌನ್ಸ್, ಸಣ್ಣಪುಟ್ಟ ದೊಂಬಿ, ಗಲಾಟೆ, ಕಳ್ಳತನ ಪ್ರಕರಣಗಳನ್ನು ಕೈಗೆತ್ತಿಕೊಂಡು ಇತ್ಯರ್ಥಪಡಿಸಲಾಗುವುದು. ಇದರಿಂದಾಗಿ ನ್ಯಾಯಾಲಯದಲ್ಲಿ ದಾಖಲಾಗುವ ಮೊಕದ್ದಮೆಗಳ ಸಂಖ್ಯೆ ಇಳಿಮುಖವಾಗಲಿದೆ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗಲಿದೆ ಅಲ್ಲದೇ ತ್ವರಿತಗತಿಯ ನ್ಯಾಯ ದೊರೆಯಲಿದೆ ಎಂದರು.
         ಪ್ರಸ್ತುತ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಲೋಕ ಅದಾಲತ್‌ನಲ್ಲಿ ಸುಮಾರು ೧೫೦೦ಕ್ಕೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಲಾಗಿದೆ. ಕಳೆದ ಮಾರ್ಚ್ ಮಾಹೆಯಿಂದ ಈವರೆಗೆ ದಾಖಲಾದ ೧೫೮೫೪ ಪ್ರಕರಣಗಳಲ್ಲಿ ೨೬೯೩ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದ್ದು, ಕಕ್ಷಿದಾರರಿಗೆ ಪರಿಹಾರವಾಗಿ ೨೦,೬೩ಕೋಟಿ ರೂ.ಗಳನ್ನು ಕೊಡಿಸಲಾಗಿದೆ ಎಂದರು.
         ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಕೆ.ಎನ್.ಸರಸ್ವತಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಮಧು ಮತ್ತು ಕಾರ್ಯದರ್ಶಿ ಹೆಚ್.ಬಿ.ದೇವೇಂದ್ರ ಅವರು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.