ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಮಾ.18 ರಿಂದ ಏ.1 ರವರೆಗೆ ತುಂಗಭದ್ರಾ ನದಿಗೆ ಸುಮಾರು 1.60 ಟಿಎಂಸಿ ನೀರನ್ನು ಬಿಡಲಾಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಕೋರಲಾಗಿದೆ.
ನದಿ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿದ ಪಂಪ್ಸೆಟ್ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ವೃತ್ತದ ಕಾರ್ಯದರ್ಶಿಗಳು ತಿಳಿಸಿದ್ದಾರೆ.