ETV Bharat / state

'ಏಕತೆ ಸಾರುವ ದೇಶ ಭಾರತ': ಶಿವಮೊಗ್ಗದಲ್ಲಿ ಸಚಿವ ನಾರಾಯಣ ಗೌಡ ಧ್ವಜಾರೋಹಣ

ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಧ್ವಜಾರೋಹಣ ನೆರವೇರಿಸಿದರು.

shivamogga
ಡಾ.ಕೆ.ಸಿ.ನಾರಾಯಣ ಗೌಡ
author img

By

Published : Jan 26, 2023, 2:16 PM IST

ಡಾ.ಕೆ.ಸಿ.ನಾರಾಯಣ ಗೌಡ ಮಾತನಾಡುತ್ತಿರುವುದು

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 74 ನೇ ಗಣರಾಜ್ಯೋತ್ಸವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ಡಿ.ಎ.ಆರ್ ಪೊಲೀಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣ ಗೌಡರವರು ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸ್ ಇಲಾಖೆ, ಗೃಹ ರಕ್ಷಕದಳ ಸೇರಿದಂತೆ ಶಾಲಾ‌ ಮಕ್ಕಳ ಪಥಸಂಚಲನ ನಡೆಯಿತು.

ಬಳಿಕ ಮಾತನಾಡಿದ ಅವರು, "ಇಂದು ನಮ್ಮ ದೇಶ ಗಣರಾಜ್ಯವಾಗಿ ಉದಯಗೊಂಡ ಪುಣ್ಯದಿನ. ಭಾರತದ ಇತಿಹಾಸದಲ್ಲಿಯೇ ಗಣರಾಜ್ಯೋತ್ಸವವು ಮಹತ್ವದ ದಿನವಾಗಿದೆ. ಮಹಾತ್ಮ ಗಾಂಧೀಜಿ, ಪಂಡಿತ್‌ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್​ರವರ ನೇತೃತ್ವದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್​ರವರು ಸ್ವತಂತ್ರ ಭಾರತಕ್ಕೊಂದು ಭದ್ರ ಸಂವಿಧಾನ ನೀಡಿದರು. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನ ನಮ್ಮದು. ಇದರ ಪ್ರಸ್ತಾವನೆಯಲ್ಲಿ, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಹಾಗೂ ಸಮಾನ ಅವಕಾಶವನ್ನು ನೀಡಲಾಗಿದೆ. ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ಏಕತೆಯನ್ನು ಸಾರುವ ದೇಶ ನಮ್ಮ ಭಾರತವಾಗಿದೆ ಎಂಬುದು ಹೆಮ್ಮೆಯ ವಿಚಾರ" ಎಂದರು.

"ಪ್ರಧಾನಿ ಮೋದಿಜಿ ಮತ್ತು ಮಾಜಿ ಸಿಎಂ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು 'ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು' ಎಂಬ ತತ್ವದಲ್ಲಿ ನಂಬಿಕೆ ಇಟ್ಟು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿದೆ. ವಿವಿಧ ಅಮೃತ್ ಯೋಜನೆಗಳು, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ, ರೈತಶಕ್ತಿ ಯೋಜನೆಯಡಿ ಡೀಸೆಲ್ ಸಹಾಯಧನ, ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ದ್ವಿತಳಿ ರೇಷ್ಮೆಗೂಡಿಗೆ ಪ್ರೋತ್ಸಾಹ ಧನ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಜಮೀನು ಒದಗಿಸುವ ಭೂಚೇತನ ಯೋಜನೆಯ ಘಟಕ ವೆಚ್ಚ ಹೆಚ್ಚಳ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸುತ್ತಿದೆ" ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ಕಾರ್ಯಗಳು: ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಚತುಷ್ಪಥ ರಸ್ತೆಗಳು, ವರ್ತುಲ ರಸ್ತೆಗಳು, ಸೇತುವೆಗಳು, ಹೊಸ ರೈಲು ಮಾರ್ಗ ಸಂಪರ್ಕಗಳಿಗೆ ಒತ್ತು ನೀಡಲಾಗಿದೆ. ಜಿಲ್ಲೆಯ ಜನತೆಯ ದಶಕಗಳ ಕನಸಾದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. 970 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು ಒಟ್ಟಾರೆ ರೂ. 1469 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಪ್ರಗತಿಯಲ್ಲಿದೆ. ಪಿಡಬ್ಲ್ಯು ಇಲಾಖೆ ವತಿಯಿಂದ ಒಟ್ಟು 104 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಒಟ್ಟು 190 ಕಿ.ಮೀ. ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.

ಇದನ್ನೂ ಓದಿ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರೋಮಾಂಚಕ ಬೈಕ್ ಸ್ಟಂಟ್; ಗಮನ ಸೆಳೆದ ಮತ ಜಾಗೃತಿ ಸ್ತಬ್ಧಚಿತ್ರ

ನಗರೋತ್ಥಾನ ಯೋಜನೆಯಡಿ ಜಿಲ್ಲೆಯ ನಗರಗಳ ಅಭಿವೃದ್ಧಿಗೆ 148 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಯೋಜನೆಯಡಿ ಸೊರಬ ಮತ್ತು ಹೊಸನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ರೂ.28.11 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಸಂಪರ್ಕ ಕಲ್ಪಿಸಲು ಜಿಲ್ಲೆಗೆ ಒಟ್ಟು ರೂ. 1031 ಕೋಟಿ ರೂ. ಮಂಜೂರಾಗಿದ್ದು, 2,27,672 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತುತ ಸಾಲಿನಲ್ಲಿ 133 ಕೋಟಿ ರೂ. ಬಿಡುಗಡೆ ಮಾಡಿದ್ದು, 328 ಕಿ.ಮೀ. ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಪಿಎಂಜಿಎಸ್​ವೈ ಯೋಜನೆಯಡಿಯಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಈ ಸಾಲಿನಲ್ಲಿ 31 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಪಿಎಂ ಕಿಸಾನ್​ ಯೋಜನೆಯಡಿಯಲ್ಲಿ ಕಳೆದ 4 ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ರೂ.476 ಕೋಟಿ ರೂಗಳನ್ನು ಜಿಲ್ಲೆಯ 1,55,859 ರೈತರ ಖಾತೆಗೆ ಜಮಾ ಮಾಡಲಾಗಿದೆ. ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಜಿಲ್ಲೆಗೆ ಒಟ್ಟು 7688 ಮನೆಗಳ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ. ಅಮೃತ ಗ್ರಾಮ ಯೋಜನೆಯಡಿ ಒಟ್ಟು 11 ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಈ ವರ್ಷ ಇದುವರೆಗೆ 28 ಲಕ್ಷ ಮಾನವ ದಿನ ಕೆಲಸ ನೀಡಲಾಗಿದ್ದು, 134 ಕೋಟಿ ರೂ. ಪಾವತಿ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯತ್‌ನಲ್ಲಿ 10ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾ ಅಂಕಣ ನಿರ್ಮಾಣ ಮಾಡಲಾಗುತ್ತಿದೆ.

ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ 9794 ರೈತರಿಗೆ 1 ಕೋಟಿ ರೂ. ವೆಚ್ಚದಲ್ಲಿ ಉಚಿತವಾಗಿ ಔಷಧಿಯನ್ನು ವಿತರಿಸಲಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಣಿಸಿಕೊಂಡ ಜಾನುವಾರುಗಳ ಚರ್ಮಗಂಟು ನಿಯಂತ್ರಣಕ್ಕಾಗಿ ಜಿಲ್ಲೆಯ ಶೇಕಡ 93 ರಷ್ಟು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ರೋಗದಿಂದ ಮರಣ ಹೊಂದಿದ 329 ಜಾನುವಾರುಗಳ ಮಾಲೀಕರಿಗೆ 63.95 ಲಕ್ಷ ರೂಪಾಯಿ ಪರಿಹಾರ ಧನ ವಿತರಿಸಲಾಗಿದೆ. 'ಸಮಾಜದ ಅಭಿವೃದ್ಧಿಯೇ ನಮ್ಮ ಸಂವಿಧಾನದ ಅಂತಿಮ ಆಶಯ' ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಮಾತನ್ನು ಅರಿತು ಅಭಿವೃದ್ಧಿಯ ಪಥದಲ್ಲಿ ನಾವು ಸಾಗುತ್ತಿದ್ದೇವೆ ಎಂದರು. ಬಳಿಕ ಹಲವು ಶಾಲಾ ಮಕ್ಜಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ; ಚಿಕ್ಕೋಡಿಯಲ್ಲಿ ಧ್ವಜಾರೋಹಣ ವೇಳೆ ಎಸಿ ಎಡವಟ್ಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.