ETV Bharat / state

ಶಿವಮೊಗ್ಗದಲ್ಲಿ ಸಂಭ್ರಮದ 72ನೇ ಗಣರಾಜ್ಯೋತ್ಸವ ದಿನಾಚರಣೆ

ನಗರದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕೆ.ಎಸ್.ಈಶ್ವರಪ್ಪ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದ್ದಾರೆ.

republic day celebration
ಗಣರಾಜ್ಯೋತ್ಸವ ಆಚರಣೆ
author img

By

Published : Jan 26, 2021, 3:44 PM IST

ಶಿವಮೊಗ್ಗ: ಇಂದು ದೇಶಾದ್ಯಂತ 72ನೇ ಗಣರಾಜೋತ್ಸವವನ್ನು ಆಚರಿಸಲಾಗುತ್ತಿದೆ. ಅದರಂತೆ ನಗರದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಧ್ವಜಾರೋಹಣ ನೆರವೇರಿಸಿದರು.

ಗಣರಾಜ್ಯೋತ್ಸವ ಆಚರಣೆ

ನಂತರ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಸ್ಮರಿಸುವ ಉದ್ದೇಶದಿಂದ ಇಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಎಲ್ಲೆಡೆ ಕಡ್ಡಾಯವಾಗಿ ನಮನ ಸಲ್ಲಿಸಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ದೊರೆಕಿದೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ. ಭದ್ರಾವತಿಯಲ್ಲಿ ಆರ್​ಎಫ್​ ಬೆಟಾಲಿಯ್ ಸ್ಥಾಪನೆ, ಕೇಂದ್ರಿಯ ವಿದ್ಯಾಲಯಗಳು, ವಿಮಾನ ನಿಲ್ದಾಣ, ನಗರದ ಹೊರ ವರ್ತುಲ ರಸ್ತೆಗಳು, ಸಿಗಂದೂರು ಸೇತುವೆ ಸೇರಿದಂತೆ ಅನೇಕ ಜನಪರ ಯೋಜನೆಗಳು ಜಿಲ್ಲೆಯ ಅಭಿವೃದ್ಧಿ ವೇಗವನ್ನು ಹೆಚ್ಚಿಸಿವೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳು, ಪಥಸಂಚಲನ ನೋಡುಗರ ಗಮನ ಸೆಳೆದವು. ಈ ಸಂದರ್ಭದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ ಸಲ್ಲಿಸಲಾಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.