ಶಿವಮೊಗ್ಗ: ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗಗಳಿಗೂ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಕಮಿಟಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ಬಸ್ ಸಂಚಾರಕ್ಕೆ ಅನುಮತಿ ನೀಡಿದರು ಸಹ ಇಲ್ಲಿಯವರೆಗೂ ಜಿಲ್ಲೆಯ ಗ್ರಾಮೀಣ ಭಾಗಗಳಿಗೆ ಬಸ್ ಸಂಚರಿಸುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಭಾಗದ ರೈತರು, ಕೂಲಿ ಕಾರ್ಮಿಕರು, ವಿಕಲಚೇತನರು ಪರದಾಡುತ್ತಿದ್ದಾರೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಹಾಗೂ ಹೊನ್ನಾಳಿ ತಾಲೂಕಿನ ಗ್ರಾಮೀಣ ಭಾಗಗಳಿಗೆ ಬಸ್ ಸಂಚಾರವನ್ನು ಕೂಡಲೇ ಪ್ರಾರಂಭಿಸುವ ಮೂಲಕ ಗ್ರಾಮೀಣ ಭಾಗದ ಜನರ ನೆರವಿಗೆ ಬರಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.