ETV Bharat / state

ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸುವಂತೆ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ - Shimoga Peace Organization

ಲಾಕ್​​​​ಡೌನ್​​ ಹಿನ್ನೆಲೆ ದೇಶಾದ್ಯಂತ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಸೂಕ್ತ ವ್ಯವಸ್ಥೆ ಇಲ್ಲದೇ ನೂರಾರು ಕಿ.ಮೀ ಕಾಲ್ನಡಿಗೆಯಲ್ಲಿಯೇ ಸಾಗುತ್ತಿದ್ದಾರೆ. ಈ ನಡುವೆ ಹಲವು ಕಾರ್ಮಿಕರ ಸಾವು ಸಹ ಸಂಭವಿಸಿದೆ. ಈ ಹಿನ್ನೆಲೆ ಅವರೆಲ್ಲರನ್ನು ಸುರಕ್ಷಿತವಾಗಿ ಊರುಗಳಿಗೆ ತಲುಪಿಸುವಂತೆ ಮನವಿ ಮಾಡಲಾಯಿತು.

Request through DC to ensure the safe delivery of migrant workers
ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸುವಂತೆ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ
author img

By

Published : May 18, 2020, 8:51 PM IST

ಶಿವಮೊಗ್ಗ: ಲಾಕ್​​​ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲಕಿರುವ ವಲಸೆ ಕೂಲಿ ಕಾರ್ಮಿಕರನ್ನು ಅವರ ಊರುಗಳಿಗೆ ಹಿಂತಿರುಗಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಸೇಶನ್ ಮಹಿಳಾ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್​​​​ಡೌನ್​​ ಜಾರಿಯಲ್ಲಿರುವುದರಿಂದ ದೇಶಾದ್ಯಂತ ವಲಸೆ ಕೂಲಿ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತಲುಪಲು ಸೂಕ್ತ ವ್ಯವಸ್ಥೆ ಇಲ್ಲದೇ ನೂರಾರು ಕಿ.ಮೀ ಕಾಲ್ನಡಿಗೆಯಲ್ಲಿಯೇ ಸಾಗುವ ಸಂದರ್ಭದಲ್ಲಿ ಕೆಲವೆಡೆ ಕಾರ್ಮಿಕರು ಮೃತಪಟ್ಟಿದ್ದಾರೆ.

ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸುವಂತೆ ಮನವಿ

ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಸ್ವಂತ ಊರುಗಳಿಗೆ ಕಳುಹಿಸಿಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.