ಶಿವಮೊಗ್ಗ: ಸೀಲ್ಡೌನ್ ಆಗಿರುವ ಪ್ರದೇಶದ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೊರೊನಾ ಪಾಸಿಟಿವ್ ಬಂದಿರುವ ಕಾರಣ ಹೊಸೂಡಿ ಪಂಚಾಯತ್ ಕ್ಷೇತ್ರದ ವ್ಯಾಪ್ತಿಗೆ ಬರುವ ಹಕ್ಕಿ ಪಿಕ್ಕಿ ಕ್ಯಾಂಪ್ ಮತ್ತು ಹರಪನಹಳ್ಳಿ ಕ್ಯಾಂಪ್ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಆಹಾರ ಸಾಮಗ್ರಿ ಹಾಗೂ ಮೂಲ ಸೌಕರ್ಯಗಳನ್ನು ಜಿಲ್ಲಾಡಳಿತ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ಈ ಎರಡು ಕ್ಯಾಂಪಿನ ಜನರು ಕಡು ಬಡವರಾಗಿದ್ದು, ಕೂಲಿ ಮಾಡಿಯೇ ಜೀವನ ಸಾಗೀಸಬೇಕಾಗಿದೆ. ಹೀಗಿರುವಾಗ ಆ ಪ್ರದೇಶ ಸೀಲ್ಡೌನ್ ಆಗಿರುವುದರಿಂದ ಅವರ ದಿನನಿತ್ಯದ ಬದುಕಿಗೆ ಸಮಸ್ಯೆ ಆಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಈ ಕೂಡಲೇ ಸೀಲ್ಡೌನ್ ಆಗಿರುವ ಎರಡು ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.