ಶಿವಮೊಗ್ಗ : ಗಣೇಶ ಹಬ್ಬದ ಆಚರಣೆಯ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಡಿ ಎಸ್ ಅರುಣ್ ಅಭಿಮಾನಿಗಳ ಬಳಗದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಗಣೇಶ ಹಬ್ಬವನ್ನು ಹೇಗೆ ಆಚರಣೆ ಮಾಡಬೇಕು ಎಂಬುದರ ಕುರಿತು ರಾಜ್ಯ ಸರ್ಕಾರ ಕೂಡಲೇ ಮಾರ್ಗಸೂಚಿ ಬಿಡುಗಡೆಗೊಳಿಸಬೇಕು ಹಾಗೂ ಪಿಒಪಿ ಗಣೇಶ ಮೂರ್ತಿಗಳ ಆಮದನ್ನು ನಿರ್ಬಂಧಿಸಬೇಕು.
ಯಾವುದೇ ಕಾರಣಕ್ಕೂ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ನಿಷೇಧ ಮಾಡಬೇಕು. ಇದರಿಂದಾಗಿ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ, ಮಣ್ಣಿನ ಗಣೇಶ ಮೂರ್ತಿಗಳನ್ನೇ ಖರೀದಿಸಲು ಆದೇಶ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.