ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಬಿಸಿಎ (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್ಗಳ ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿಸಿದೆ. ಶೀಘ್ರ ಮೌಲ್ಯಮಾಪನಕ್ಕೆ ಹೆಸರಾಗಿರುವ ಕುವೆಂಪು ವಿವಿಯು ಈ ಹಿಂದೆಯೂ ಶೀಘ್ರವಾಗಿ ಫಲಿತಾಂಶ ನೀಡಿ ವಿದ್ಯಾರ್ಥಿಗಳಿಗೆ ನೆರವಾಗಿತ್ತು.
ಪ್ರಸ್ತುತ ನಾನ್ - ಎನ್ಇಪಿ ಬ್ಯಾಚ್ನ ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಕ್ತಾಯಗೊಂಡ ಕೇವಲ 2 ದಿನಗಳ ಒಳಗಾಗಿ ಪ್ರಕಟಿಸಲಾಗಿದೆ. ಫಲಿತಾಂಶವು ವಿಶ್ವವಿದ್ಯಾಲಯದ ಪೋರ್ಟಲ್ನಲ್ಲಿಯೂ ಲಭ್ಯವಿದೆ. ಜೊತೆಗೆ ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ರವಾನಿಸಲಾಗಿದೆ.
ತ್ವರಿತ ಫಲಿತಾಂಶ ಪ್ರಕಟಣೆ ಕುರಿತು ಪ್ರತಿಕ್ರಿಯಿಸಿದ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್ ಎಂ ಗೋಪಿನಾಥ್, ವಿವಿ ವ್ಯಾಪ್ತಿಯ ಬಿಸಿಎ ಪದವಿಯ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಿದೆ. ಇದರ ಹಿಂದೆ ವಿವಿಯ ಪರೀಕ್ಷಾಂಗ ಸಿಬ್ಬಂದಿ, ಬೋಧಕ ವರ್ಗವು ಸಾಕಷ್ಟು ಶ್ರಮಿಸಿದೆ. ಅವರ ಸಹಕಾರದಿಂದ ತ್ವರಿತವಾಗಿ ಫಲಿತಾಂಶ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗ, ಉದ್ಯೋಗಕ್ಕೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ : KSET Exam: ಕೆ ಸೆಟ್ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ