ಶಿವಮೊಗ್ಗ: ಜೆಡಿಎಸ್ ಜಿಲ್ಲಾಧ್ಯಕ್ಷ, ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು.
ಬಳಿಕ ಸುದ್ದಿಗಾರೊಂದಿಗೆ ಮಾತನಾಡುತ್ತಾ, ಎಲ್ಲರೂ ಒಗ್ಗೂಡಿ ಪಕ್ಷ ಸಂಘಟಿಸುವ ಮೂಲಕ ಮತ್ತೊಮ್ಮೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಬಲ್ಯ ಬಲಪಡಿಸಬೇಕಿದೆ. ಜೊತೆಗೆ ಮುಂಬರುವ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿನ ಗುರಿ ಎಂದರು.
ಕಿಮ್ಮನೆ ರತ್ನಾಕರ್ ಕೆಪಿಸಿಸಿ ರಾಜ್ಯಾಧ್ಯಕ್ಷರಿಗೆ ಮಂಜುನಾಥ್ ಗೌಡ ಅವರನ್ನು ಪಕ್ಷದ ಸಿದ್ಧಾಂತ ತಿಳಿಸಿ ಸೇರ್ಪಡೆಗೊಳಿಸಿ ಎಂದು ಪತ್ರ ಬರೆದ ಕುರಿತಂತೆ ಪ್ರತಿಕ್ರಿಯಿಸಿ, ಕಿಮ್ಮನೆ ರತ್ನಾಕರ್ ಅವರೊಂದಿಗೆ ಸೇರಿ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಗೆಲುವು ಸಾಧಿಸುವುದು ನಮ್ಮ ಗುರಿ. ವೈಯಕ್ತಿಕ ಪ್ರತಿಷ್ಠೆ ಬಿಟ್ಟು ಪಕ್ಷಕ್ಕಾಗಿ ಕಾರ್ಯ ನಿರ್ವಹಿಸುತ್ತೇವೆ. ನಾನು ಯಾವುದೇ ಷರತ್ತು ಹಾಕದೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದರು.
ಈ ವೇಳೆ ಎಂಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.