ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ.
ಸಾಗರ ವಲಯ ತ್ಯಾಗರ್ತಿಯ ಉಪವಲಯ ಅರಣ್ಯಾಧಿಕಾರಿ ಲೋಕನಾಥ್ ಮೃತರು. ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್ನಿಂದ ಬಿದ್ದ ಲೋಕನಾಥ್ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಸ್ಥಳೀಯರು ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ನಾರಾಯಣ ಹೃದಯಾಲಯಕ್ಕೆ ಅವರನ್ನು ರವಾನೆ ಮಾಡಲಾಗಿತ್ತು. ಇಲ್ಲಿ ಕೂಡ ಚಿಕಿತ್ಸೆ ಫಲಕಾರಿಯಾಗದ ಕಾರಣ ಮಣಿಪಾಲ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇವರ ನಿಧನಕ್ಕೆ ಅರಣ್ಯಾ ಇಲಾಖೆ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪ್ಲಾಸ್ಟಿಕ್ ಅಂಗಡಿಗಳಲ್ಲಿ ಆಕಸ್ಮಿಕ ಬೆಂಕಿ: ಇಬ್ಬರು ಸಜೀವ ದಹನ!