ETV Bharat / state

ಬೈಕ್​ಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಗರ್ಭಿಣಿ ದುರ್ಮರಣ - ಬೈಕ್​ಗೆ ಬಸ್ಸೊಂದು ಡಿಕ್ಕಿ

ಬೈಕ್​ಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಗೊಂದಿ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ.

accident
ಅಪಘಾತ
author img

By

Published : Nov 2, 2020, 6:35 PM IST

ಶಿವಮೊಗ್ಗ: ಕೆಎಸ್ಆರ್​ಟಿಸಿ ಬಸ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಗರ್ಭಿಣಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗೊಂದಿ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ

ರಂಜಿತ ಮೃತ ಗರ್ಭಿಣಿ. ಭದ್ರಾವತಿ ತಾಲೂಕು ಸೈದರ ಕಲ್ಲಹಳ್ಳಿ ಗ್ರಾಮದ ರಂಜಿತ ತನ್ನ ಪತಿ ಅರುಣ್ ಜೊತೆ ಆಸ್ಪತ್ರೆಗೆಂದು ಬೈಕ್​ನಲ್ಲಿ ಬರುವಾಗ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ರಂಜಿತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅರುಣ್​ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.