ETV Bharat / state

ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್​ಗೆ ಪಿಕಪ್ ವಾಹನ ಡಿಕ್ಕಿ: ಶಿವಮೊಗ್ಗದಲ್ಲಿ ಇಬ್ಬರು ಸಾವು - ಶಿವಮೊಗ್ಗದಲ್ಲಿ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸಾವು

ಗೊಂದಿ ಚಟ್ನಳ್ಳಿ ಗ್ರಾಮದ ಎಸ್.ಕೆ.ಮೆಕ್ಯಾನಿಕ್ ಶಾಪ್ ಬಳಿ ಅಡಿಕೆ ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್​​ ಹಿಂಬದಿಗೆ ಶಿವಮೊಗ್ಗ ಕಡೆಯಿಂದ ಬಂದ ಪಿಕಪ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.

ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್​ಗೆ ಪಿಕಪ್ ವಾಹನ ಡಿಕ್ಕಿ

author img

By

Published : Jan 5, 2022, 3:35 PM IST

ಶಿವಮೊಗ್ಗ: ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್​ಗೆ ಮಹೇಂದ್ರ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡರು. ಈ ಘಟನೆ ತಾಲೂಕಿನ ಗೊಂದಿ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಟ್ರೈಲರ್‌ನಲ್ಲಿ ಐವರು ಪ್ರಯಾಣಿಕರಿದ್ದರು. ಇದರಲ್ಲಿ ಹನುಮಂತಪ್ಪ(24) ಹಾಗೂ ದಿನೇಶ್ (18) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿವರ:

ಗೊಂದಿ ಚಟ್ನಳ್ಳಿ ಗ್ರಾಮದ ಎಸ್.ಕೆ.ಮೆಕ್ಯಾನಿಕ್ ಶಾಪ್ ಬಳಿ ಅಡಿಕೆ ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್​​ ಹಿಂಬದಿಗೆ ಶಿವಮೊಗ್ಗ ಕಡೆಯಿಂದ ಬಂದ ಪಿಕಪ್ ಡಿಕ್ಕಿ ಹೊಡೆಯಿತು. ಪಿಕಪ್ ವಾಹನ ತನ್ನ ಎದುರಿಗೆ ಬಂದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟ್ರೈಲರ್​​ಗೆ ಡಿಕ್ಕಿ ಹೊಡೆದಿದೆ.

ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.