ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಪಂಚಾಯತ್ ಸಭಾಂಗಣದ ಮೇಲ್ಛಾವಣಿ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸಭಾಂಗಣದ ಮೇಲ್ಛಾವಣಿಯನ್ನು ಶೀಟ್ನಿಂದ ನಿರ್ಮಾಣ ಮಾಡಲಾಗಿತ್ತು. ಈ ಮೊದಲೇ ಮೇಲ್ಛಾವಣಿ ಬಿಳುವ ಸ್ಥಿತಿಯಲ್ಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೇಲ್ಛಾವಣಿ ದುರಸ್ತಿ ಮಾಡಿಸಿರಲಿಲ್ಲ.
ಇದೀಗ ಮೇಲ್ಛಾವಣಿ ಕುಸಿದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇದೇ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಭಾರಿ ಅನಾಹುತ ತಪ್ಪಿದಂತಾಗಿದೆ.