ಶಿವಮೊಗ್ಗ: ನಗರದ ಬಸವನಗುಡಿ 5ನೇ ಕ್ರಾಸ್ನಲ್ಲಿ ರೌಡಿ ಶೀಟರ್ ಮೇಲೆ ಮಾರಕಾಸ್ತಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಂಜುನಾಥ್ ಭಂಡಾರಿ (30) ಎನ್ನುವ ವ್ಯಕ್ತಿಯನ್ನು ಬೈಕ್ನಲ್ಲಿ ಬಂದ ಮೂವರ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇನ್ನು ರೌಡಿಶೀಟರ್ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು, ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಟಿ ಶೇಖರ್, ಸಿಇಎನ್ ಠಾಣೆ ಇನ್ಸ್ಪೆಕ್ಟರ್ ಗುರುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.