ETV Bharat / state

ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರಿಗೆ ಆರ್​ಟಿಪಿಸಿಆರ್​ ರಿಪೋರ್ಟ್​ ಕಡ್ಡಾಯ : ಶಿವಮೊಗ್ಗ ಡಿಸಿ - RTPCR Report is compulsory in Shimoga

ಕೋವಿಡ್-19 ನಿಯಂತ್ರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು ಮತ್ತು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ..

KB Shivakumar
ಕೆ.ಬಿ ಶಿವಕುಮಾರ್
author img

By

Published : Aug 4, 2021, 10:59 PM IST

ಶಿವಮೊಗ್ಗ : ಕೋವಿಡ್-19 ಸೋಂಕಿನ 3ನೇ ಅಲೆ ನಿಯಂತ್ರಿಸುವ ಸಂಬಂಧ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಜಿಲ್ಲಾಧಿಕಾರಿಗಳಾದ ಕೆ ಬಿ ಶಿವಕುಮಾರ್ ಅವರು ಆಗಸ್ಟ್ 5ರಿಂದ 15ರವರೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದ್ದಾರೆ.

ಕಡ್ಡಾಯವಾಗಿ ಪಾಲಿಸಬೇಕಾದ ಮಾರ್ಗಸೂಚಿಗಳು

• ಕೋವಿಡ್-19 ನಿಯಂತ್ರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು ಮತ್ತು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆ ಕಡ್ಡಾಯಗೊಳಿಸಲಾಗಿದೆ.

• ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆ ಪಡೆಯದಿದ್ದರೂ ಸಹ 72 ಗಂಟೆಗಳ ಒಳಗೆ ಮಾಡಿಸಿದ ಆರ್​ಟಿಪಿಸಿಆರ್​ ಪರೀಕ್ಷಾ ನೆಗೆಟಿವ್ ಪ್ರಮಾಣಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.

• ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕ್ಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್​ಟಿಪಿಸಿಆರ್​ ನೆಗೆಟಿವ್ ವರದಿ ಹೊಂದಿರಬೇಕು. ಅದನ್ನು ಹೋಟೆಲ್ ಮತ್ತು ತಂಗುದಾಣಗಳಲ್ಲಿ ಪ್ರವೇಶಿಸುವ ಸಮಯದಲ್ಲಿ ತರಬೇಕು ಎಂದು ಆದೇಶಿಸಲಾಗಿದೆ.

• ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿಆರ್‌ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆ ಒಳಗಾಗಿ ಮಾಡಿಸಿದ ಆರ್​ಡಿಪಿಸಿಆರ್​ ನೆಗೆಟಿವ್ ಪ್ರಮಾಣಪತ್ರ ಹೊಂದಿರ ಬೇಕಾಗಿರೋದನ್ನ ಕಡ್ಡಾಯಗೊಳಿಸಲಾಗಿದೆ.

• ಮದುವೆ ಸಮಾರಂಭಗಳಲ್ಲಿ ಕೇವಲ 50 ಜನರಿಗೆ ಮಾತ್ರ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಭಾಗವಹಿಸಲು ಅನುಮತಿಸಲಾಗಿದೆ. ಕೋವಿಡ್-19 ನಿರ್ವಹಣೆ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಡಳಿತದಿಂದ ನೀಡುವ ನಿರ್ದೇಶನಗಳನ್ನು ಉಲ್ಲಂಘಿಸುವಂತಿಲ್ಲ.

ಒಂದು ವೇಳೆ ಉಲ್ಲಂಘಿಸಿದ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 51ರಿಂದ 60ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಲಂ 188ರ ಅಡಿಯಲ್ಲಿ ಕ್ರಮಕೈಗೊಳ್ಳಬಹುದು.

ಜತೆಗೆ ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರೆ ಕಾನೂನು ಕಾಯ್ದೆಗಳ ಮೇರೆಗೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ: ಅಗರಬತ್ತಿ ಕಂಪನಿಗೆ ಉಪೇಂದ್ರ ಪ್ರಜಾಕೀಯ ಪಕ್ಷದ ಹೆಸರು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.