ಶಿವಮೊಗ್ಗ: ಸಾಗರದ ಶಾಸಕ, ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿದ್ದ ಶಾಸಕರು ಮೈಕೈ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಟೆಸ್ಟ್ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ದೃಢವಾಗಿದೆ.
ಅವರ ಪತ್ನಿ, ಕಾರು ಚಾಲಕ ಹಾಗೂ ಮನೆಗೆಲಸದವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಅವರಿಗೂ ಮಹಾಮಾರಿ ಕೊರೊನಾ ವಕ್ಕರಿಸಿದೆ.
ಸದ್ಯ ಶಾಸಕ ಹಾಲಪ್ಪ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಸಂಪರ್ಕ ಹೊಂದಿದ್ದವರು ಕ್ವಾರಂಟೈನ್ಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿದ್ದಾರೆ.