ETV Bharat / state

ಗೋ ಹತ್ಯೆ ನಿಷೇಧಕ್ಕೆ ರಾಜ್ಯಪಾಲರು ಸಹಿ ಹಾಕದಂತೆ, ಎಸ್​ಡಿಪಿಐನಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನು ಪ್ರಜೆಗಳಿಗೆ ನೀಡಿರುವ ಆಹಾರ ಹಕ್ಕಿನ ಉಲ್ಲಂಘನೆಯಾದಂತೆ. ಆದ್ದರಿಂದ ರಾಜ್ಯಪಾಲರು ಯಾವುದೇ ಕಾರಣಕ್ಕೂ ಈ ಕಾನೂನು ಜಾರಿಗೆ ಬರುವಂತೆ ಸಹಿ ಹಾಕಬಾರದು ಎಂದು ಶಿವಮೊಗ್ಗದಲ್ಲಿ ಎಸ್​ಡಿಪಿಐಯಿಂದ ಪ್ರತಿಭಟನೆ ನಡೆಸಲಾಯಿತು.

SDPI Protest
ಎಸ್​ಡಿಪಿಐನಿಂದ ಪ್ರತಿಭಟನೆ
author img

By

Published : Dec 29, 2020, 2:50 PM IST

ಶಿವಮೊಗ್ಗ: ಗೋ ಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸಹಿ ಹಾಕಬಾರದು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಎಸ್​ಡಿಪಿಐನಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನು, ದಲಿತ, ಅಲ್ಪಸಂಖ್ಯಾತ ಹಾಗೂ ಸಂವಿಧಾನ ವಿರೋಧಿ ಕಾನೂನಾಗಿದೆ ಹಾಗೂ ಆರ್​​ಎಸ್​​ಎಸ್​ನ ಕಾರ್ಯಸೂಚಿಯಾಗಿದೆ. ಈ ಕಾನೂನಿನಿಂದ ಪ್ರಜೆಗಳಿಗೆ ಸಂವಿಧಾನ ನೀಡಿರುವ ಆಹಾರ ಹಕ್ಕು ಉಲ್ಲಂಘನೆಯಾಗುತ್ತದೆ. ಈ ಕಾರಣದಿಂದಾಗಿ ರಾಜ್ಯಪಾಲರು ಯಾವುದೇ ಕಾರಣಕ್ಕೂ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನಿಗೆ ಸಹಿ ಹಾಕಬಾರದು ಹಾಗೂ ಈ ಕಾನೂನನ್ನು ತಿರಸ್ಕರಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.