ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಾದ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಪೂರ್ವ ವಲಯ ಐಜಿಪಿ ನಗರದಲ್ಲೇ ಮೊಕ್ಕಾಂ ಹೂಡಿದ್ದು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಖಾಸಗಿ ಬಸ್ ಸಂಚಾರ ಇಲ್ಲ: ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ನಗರದಲ್ಲಿ ಅಂಗಡಿ, ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.
ಪ್ರಮುಖ ಸರ್ಕಲ್‌ಗಳಲ್ಲಿ ಬ್ಯಾರಿಕೇಡ್: ನಗರದ ಪ್ರಮುಖ ವೃತ್ತಗಳಾದ ಅಮೀರ್ ಅಹ್ಮದ್ ಸರ್ಕಲ್, ಗೋಪಿವೃತ್ತ, ಶಿವಪ್ಪನಾಯಕ ಸರ್ಕಲ್, ಅಶೋಕ ಸರ್ಕಲ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ.
ಓದಿ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿ
ಪೆಟ್ರೋಲ್ ಬಂಕ್ ಬಂದ್: ನಗರದಲ್ಲಿ ಅನೇಕ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗಿದ್ದು ವಾಹನ ಸವಾರರು ಪರದಾಡುವ ಪರಿಸ್ಥಿತಿ ಇದೆ.
ಸಾರ್ವಜನಿಕ ಸ್ಥಳಗಳಲ್ಲಿ ಐದು ಜನರಿಗಿಂತ ಹೆಚ್ಚು ಜನ ಸೇರಿದಂತೆ ಆಟೋಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.