ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರ ಸಂಬಂಧ ನಡೆದ ಗಲಾಟೆ ಹಿನ್ನೆಲೆಯಲ್ಲಿ ನಗರದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ಅನ್ನು ಆಗಸ್ಟ್ 23ರವರೆಗೆ ವಿಸ್ತರಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಸೋಮವಾರದಿಂದ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ ನಿಷೇಧಾಜ್ಞೆ ಮುಂದುವರೆಸಲಾಗಿದೆ.
ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಆ.15 ರಂದು ಇರಿಸಲಾಗಿದ್ದ ವೀರ ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ ಬೆನ್ನಲ್ಲೇ ಗಲಾಟೆ ನಡೆದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಹೀಗಿದ್ದರೂ ಕೆಲ ಗಂಟೆಗಳಲ್ಲೇ ರಾಜಸ್ಥಾನ ಮೂಲದ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು.
ಇದನ್ನೂ ಓದಿ: ಸಾವರ್ಕರ್ ಫ್ಲೆಕ್ಸ್ ವಿವಾದ: ನಾಳೆ ಮತ್ತೊಮ್ಮೆ ಪರಿಶೀಲಿಸಿ ಮುಂದಿನ ಕ್ರಮವೆಂದ ಐಜಿಪಿ
ಘಟನೆಯಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ಸದ್ಯ ಪರಿಸ್ಥಿತಿ ಶಾಂತಿಯುತವಾಗಿರುವ ಕಾರಣ ಶುಕ್ರವಾರ ಕೆಲವು ನಿಯಮಗಳನ್ನು ಸಡಿಲಗೊಳಿಸಿ ರಾತ್ರಿ 10 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಸೂಚನೆ